Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಕೊಪ್ಪಳ‌ ವಿವಿ ಕುಲಪತಿ ಡಾ. ಬಿ ಕೆ ರವಿ ಅವರ 'ಆಧುನಿಕ ಮಾಧ್ಯಮ, ಚುನಾವಣೆಗಳು ಮತ್ತು ಪ್ರಜಾಪ್ರಭುತ್ವ' ಕೃತಿ‌ ಲೋಕಾರ್ಪಣೆಗೊಳಿಸಿದ ಸಿಎಂ - Karnataka Kahale

ಕೊಪ್ಪಳ‌ ವಿವಿ ಕುಲಪತಿ ಡಾ. ಬಿ ಕೆ ರವಿ ಅವರ ‘ಆಧುನಿಕ ಮಾಧ್ಯಮ, ಚುನಾವಣೆಗಳು ಮತ್ತು ಪ್ರಜಾಪ್ರಭುತ್ವ’ ಕೃತಿ‌ ಲೋಕಾರ್ಪಣೆಗೊಳಿಸಿದ ಸಿಎಂ

ಬೆಂಗಳೂರು, ಡಿ. 25: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.ಕೆ.ರವಿ ಅವರ “ಆಧುನಿಕ ಮಾಧ್ಯಮ,ಚುನಾವಣೆಗಳು ಮತ್ತು ಪ್ರಜಾಪ್ರಭುತ್ವ (MODERN MEDIA, ELECTIONS AND DEMOCRACY) ಕೃತಿಯ ಅಂತಾರಾಷ್ಟ್ರೀಯ ಆವೃತ್ತಿಯನ್ನು ಕಾವೇರಿ ನಿವಾಸದಲ್ಲಿ ಬುಧವಾರ ಬಿಡುಗಡೆ ಮಾಡಿದರು.                              ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೃತಿ ವೈಜ್ಞಾನಿಕ ಅಂಕಿ ಅಂಶಗಳ ಆಧಾರದಲ್ಲಿ ವಿಶ್ಲೇಷಣೆಗೆ ಒಳಗಾಗಿರುವುದರಿಂದ ರಾಜಕೀಯ ವಿಜ್ಞಾನ ಮತ್ತು ಮಾಧ್ಯಮ ವಿದ್ಯಾರ್ಥಿಗಳ ಅಧ್ಯಯನಕ್ಕೆ ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯ ಸಂದರ್ಭದಿಂದ ಈ ಕ್ಷಣದವರೆಗೆ ದೇಶದಲ್ಲಿ ನಡೆದ ಚುನಾವಣೆಗಳು, ಚುನಾವಣಾ ರಾಜಕಾರಣ ಕುರಿತಂತೆ ಮಾಧ್ಯಮಗಳು ಕಾಲ ಕಾಲಕ್ಕೆ ಬದಲಾಗಿರುವುದು, ಚುನಾವಣಾ ಸ್ವರೂಪದಲ್ಲಿ ಆದ ಮಾರ್ಪಾಡುಗಳು, ಇವೆಲ್ಲದರಿಂದ ದೇಶದ ಪ್ರಜಾಪ್ರಭುತ್ವದ ಮೇಲೆ ಆಗಿರುವ ಪರಿಣಾಮಗಳ ವಿಶ್ಲೇಷಣಾತ್ಮಕ ಹಾಗೂ     “ರಾಜಕೀಯ ಸಂವಹನ” ಕ್ಷೇತ್ರದ ಆಳವಾದ ಅಧ್ಯಯನದಿಂದ ಬಂದಿರುವ ಅಪರೂಪದ ವಿಶ್ಲೇಷಣಾತ್ಮಕ ಕೃತಿ ಇದಾಗಿದೆ.