Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಬಳ್ಳಾರಿ ಗುಡಾರನಗರದ ಕೆ.ಶಂಕರಪ್ಪ ಆಯ್ಕೆ - Karnataka Kahale

ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಬಳ್ಳಾರಿ ಗುಡಾರನಗರದ ಕೆ.ಶಂಕರಪ್ಪ ಆಯ್ಕೆ

ಬಳ್ಳಾರಿ,ಮಾ.3: ಕರ್ನಾಟಕ ಜಾನಪದ ಅಕಾಡೆಮಿಯ 2024 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಜಿಲ್ಲೆಯ ಶ್ರೀಧರಗಡ್ಡೆ ಗುಡಾರ ನಗರ ಬಡಾವಣೆ ಬುಡಗ ಜಂಗಮ ಕಾಲೋನಿಯ ನಿವಾಸಿ ಕೆ.ಶಂಕರಪ್ಪ ಅವರು ಆಯ್ಕೆಯಾಗಿದ್ದಾರೆ.

ಹಗಲುವೇಷ ಕಲಾ ಪ್ರಕಾರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಶಂಕರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನಮ್ರತ ಅವರು ತಿಳಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರಿಗೆ ಗೌರವ ಪ್ರಶಸ್ತಿಯ ಜತೆ ರೂ.25,000‌ನಗದು ಮತ್ತು ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುವುದು.

ಬೆಂಗಳೂರಿನಲ್ಲಿ ನಡೆದ ಸರ್ವ ಸದಸ್ಯರ ಸಭೆಯ ತೀರ್ಮಾನದಂತೆ 2024 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಜಾನಪದ ಕಲಾವಿದರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭಿನಂದನೆ: ಕರ್ನಾಟಕ ಜಾನಪದ ಅಕಾಡೆಮಿಯ 2024 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿರುವ ಹಗಲುವೇಷಗಾರ ಕೆ. ಶಂಕರಪ್ಪ ಅವರನ್ನು ಕರ್ನಾಟಕ ಜಾನಪದ ಪರಿಷತ್ತು, ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.‌ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಡಾ. ಅಶ್ವರಾಮು, ದಸಾಪ‌ ಜಿಲ್ಲಾಧ್ಯಕ್ಷ ಡಾ.‌ನಾಗಪ್ಪ ಬಿ.ಇ ಅಭಿನಂದಿಸಿದ್ದಾರೆ.

———-