ಬಳ್ಳಾರಿ ಮೇ 15 : ಕರ್ನಾಟಕ ಜಾನಪದ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ಜಿಲ್ಲೆಯ ಜಾನಪದ ಕಲಾವಿದ ದಳವಾಯಿ ಚಿತ್ತಪ್ಪ ಅವರಿಗೆ ಬುಧವಾರ ಸಂಡೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದ ಸ್ವಗೃಹದಲ್ಲಿ ಪ್ರದಾನ ಮಾಡಲಾಯಿತು. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅವರು ಹಿರಿಯ ಕಲಾವಿದ ಚಿತ್ತಪ್ಪ ಅವರಿಗೆ ಸ್ವಗೃಹದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು.
ಬೀದರ್ ಜಿಲ್ಲೆಯಲ್ಲಿ ನಡೆದ 2023- 24 ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಯೋಸಹಜ ಕಾರಣದಿಂದಾಗಿ ದಳವಾಯಿ ಚಿತ್ತಪ್ಪ ಅವರು ಗೈರಾಗಿದ್ದರು.
ಈ ಸಂದರ್ಭದಲ್ಲಿ ಜಾನಪದ ಅಕಾಡೆಮಿಯ ಸದಸ್ಯರಾದ ಮಲ್ಲಿಕಾರ್ಜುನ ಕಲಮರಳ್ಳಿ,, ಮಲ್ಲಿಕಾರ್ಜುನ ಕೆಂಕೆರೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾದ ಶಿವನಾಯಕ ದೊರೆ ಮತ್ತು ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತ ಎನ್ ಉಪಸ್ಥಿತರಿದ್ದರು.