ಕೊಪ್ಪಳ‌ ವಿವಿ: ಮೇ.31ರಂದು ಮಾಹಿತಿ ಹಕ್ಕು ಅಧಿನಿಯಮ ಕುರಿತು ಕಾರ್ಯಗಾರ

ಕೊಪ್ಪಳ, ಮೇ 27: ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯ ಮಾಹಿತಿ ಹಕ್ಕು ಅಧಿನಿಯಮ – 2005 ರ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮೇ.31 ರಂದು ಶನಿವಾರ  ಹಮ್ಮಿಕೊಂಡಿದೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಕಾರ್ಯಾಗಾರಕ್ಕೆ ಚಾಲನೆ‌ ನೀಡಲಿದ್ದಾರೆ.                  ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ಡಾ.ಹರೀಶ್ ಕುಮಾರ್, ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ, ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ರಾಜಶೇಖರ್ ಎಸ್, ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ .ಕೆ, ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ಮಮತಾ.ಬಿ.ಆರ್ ಅವರು ಭಾಗವಹಿಸಲಿದ್ದಾರೆ.
ಕೊಪ್ಪಳ ವಿಶ್ವ ವಿದ್ಯಾಲಯದ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್, ವಿವಿಯ ಹಣಕಾಸು ಅಧಿಕಾರಿ ಅಮೀನಸಾಬ ಅತ್ತಾರ, ಗಂಗಾವತಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಮುಮ್ತಾಜ್ ಬೇಗಂ, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಕೆ.ಎಚ್.ಛತ್ರದ, ಕೊಪ್ಪಳ ವಿಶ್ವ ವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಹಾಗೂ ಸಿಂಡಿಕೇಟ್ ಹಾಗೂ ಆಕಾಡೆಮಿಕ್ ಕೌನ್ಸಿಲ್ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ವಿವಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *