Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಎನ್‌ಎಸ್‌ಎಸ್‌ ವಿಶೇಷ ಶಿಬಿರಕ್ಕೆ ಚಾಲನೆ:ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಅತ್ಯಗತ್ಯ -ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ - Karnataka Kahale

ಎನ್‌ಎಸ್‌ಎಸ್‌ ವಿಶೇಷ ಶಿಬಿರಕ್ಕೆ ಚಾಲನೆ:ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಅತ್ಯಗತ್ಯ -ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ

ಸಿರುಗುಪ್ಪ;ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು ಎಂದು ತೆಕ್ಕಲಕೋಟೆ ಶ್ರೀಮತಿ ಹೊನ್ನುರಮ್ಮ ದಿ.ಸಿದ್ದಪ್ಪ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ
ಡಾ.ಮಲ್ಲಿಕಾರ್ಜುನ ಮೋಕ ಅವರು ಹೇಳಿದರು.
ಸಮೀಪದ ದೇವಿನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಸೋಮವಾರ ನಡೆದ ಎನ್‌ಎಸ್‌ಎಸ್‌ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎನ್‌ಎಸ್‌ಎಸ್‌ ವಿಶೇಷ ಶಿಬಿರದಲ್ಲಿ ಭಾಗವಹಿಸುವುದರಿಂದ ಶಿಸ್ತು, ಸಮಯ ಪ್ರಜ್ಞೆ ಹಾಗೂ ಪರಿಸರ ಕಾಳಜಿ ಬೆಳೆಯುತ್ತದೆ. ಹೀಗಾಗಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಎನ್‌ಎಸ್‌ಎಸ್‌
ಘಟಕಕ್ಕೆ ಸೇರಿಕೊಳ್ಳಬೇಕು. ಪ್ರತಿಯೊಬ್ಬರೂ ಗ್ರಾಮದ ಸ್ವಚ್ಛತೆಗೆ ಕೈ ಜೋಡಿಸಬೇಕು. ಸುಂದರ ಪರಿಸರ ನಿರ್ಮಾಣಕ್ಕೆ ಪಣತೊಡಬೇಕು ಎಂದು ತಿಳಿಸಿದರು.
ಮನೆ, ಶಾಲೆ ಹಾಗೂ ಕಾಲೇಜುಗಳಲ್ಲಿಸ್ವಚ್ಛತೆ ಆದ್ಯತೆ ನಿಡಬೇಕು. ಗಿಡ ಹಾಗೂ ಮರಗಳನ್ನು ಬೆಳೆಸಬೇಕು ಎಂದು ಹೇಳಿದರು.
ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಮಹೇಶ್ವರಿ ಮಾತನಾಡಿ, ಜೀವನದಲ್ಲಿಒಳ್ಳೆಯ ಕೆಲಸ ಮಾಡಬೇಕು. ಕೆಟ್ಟ ಕೆಲಸ ಮಾಡುವ ಮನಸ್ಸು ಮಾಡಬಾರದು ಎಂದು ಹೇಳಿದರು.
ದೇವಿನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎ.ನಾರಾಯಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿಗುರಿ ಇಟ್ಟುಕೊಳ್ಳಬೇಕು. ಗುರಿ ಸಾಧನೆಗೆ ನಿರಂತರ ಶ್ರಮಿಸಬೇಕು ಎಂದು ಹೇಳಿದರು.
ಸನ್ಮಾನ: ಈ ಸಂದರ್ಭದಲ್ಲಿವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಮಹೇಶ್ವರಿ ಹಾಗೂ ಕಾಲೇಜಿನ ಎನ್‌ಎಸ್‌ಎಸ್‌ ಬಿ ಘಟಕದ ಶಿಬಿರಾಧಿಕಾರಿ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಎನ್‌ಎಸ್‌ಎಸ್‌ ಎ ಘಟಕದ ಶಿಬಿರಾಧಿಕಾರಿ ಪ್ರೊ. ಎ.ಎಸ್‌.ಬಸವರಾಜ, ವಾಣಿಜ್ಯ ಶಾಸ್ತ್ರ ವಿಭಾಗ ಅತಿಥಿ ಪ್ರಾಧ್ಯಾಪಕಿ ಸವಿತಾ, ಇಂಗ್ಲಿಷ ವಿಭಾಗದ ಅತಿಥಿ ಪ್ರಾಧ್ಯಾಪಕಿ ಸರಸ್ವತಿ, ಅತಿಥಿ ಪ್ರಾಧ್ಯಾಪಕರಾದ ಡಾ.ರಾಜಣ್ಣ, ಡಾ.ಶಿವಣ್ಣ, ಕುಮಾರ ಸ್ವಾಮಿ, ಸುಭಾನ್‌, ಎಚ್‌.ವಿರೇಶ, ಡಾ.ಹಸನೇಪ್ಪ ನಾಯಕ, ಬಸನಗೌಡ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಪ್ರಾಧ್ಯಾಪಕ ರಾಮಾಂಜನೇಯ ನಿರ್ವಹಿಸಿದರು. ಡಾ.ರಾಜಣ್ಣ ಸ್ವಾಗತಿಸಿದರು. ಸುಭಾನ್‌ ವಂದಿಸಿದರು.
—–