
ಬಳ್ಳಾರಿ, ಜು.14: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾಗಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ನಾಗರಾಜು ಸಿ ಅವರು ಅಧಿಕಾರ ಸ್ವೀಕರಿಸಿದರು. ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಜಿ. ಪಿ. ದಿನೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿವಿ ಕುಲಪತಿ ಪ್ರೊ. ಮುನಿರಾಜು ಉಪಸ್ಥಿತರಿದ್ದರು.
*****