ಹಗರಿಬೊಮ್ಮನಹಳ್ಳಿ, ಜು.18: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.19 ರಂದು ಶನಿವಾರ ಪಟ್ಟಣದ ಶ್ರೀ ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಉಮಾಪತಿ ಶೆಟ್ಟರ್ ಅವರು ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ. ನೇಮಿರಾಜ್ ನಾಯ್ಕ್ ನೆರವೇರಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ವಿಜಯನಗರ ಜಿಲ್ಲೆಯ ಪತ್ರಕರ್ತರ ಸಂಘದ ಅಧ್ಯಕ್ಷ ಪಿ. ಸತ್ಯನಾರಾಯಣ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ. ನಿಂಗಜ್ಜ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ವಿಶೇಷ ಉಪನ್ಯಾಸವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ.ಎನ್. ಚಿನ್ನಸ್ವಾಮಿ ಸೋಸಲೆ ಅವರು ನೀಡಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಕವಿತಾ.ಆರ್, ತಾ ಪಂ ಇ ಒ ಡಾ. ಪರಮೇಶ್ವರಪ್ಪ,, ಪುರಸಭೆಯ ಮುಖ್ಯಾಧಿಕಾರಿ ಎಂ. ಕೆ. ಮುಗಳಿ , ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್, ಕಾನಿಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ಲಕ್ಷ್ಮಣ್, ಕಾನಿಪ ರಾಜ್ಯ ಸಮಿತಿ ಸದಸ್ಯ ವೆಂಕೋಬ ನಾಯಕ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ತಾಲೂಕಿನ ಗ್ರಾ ಪಂ ಯ ಜವಾನರು ಹಾಗೂ ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಮಾಪತಿ ಶೆಟ್ಟರ್ ತಿಳಿಸಿದರು.