ದಾವಣಗೆರೆ ಜಿಲ್ಲಾ ಸಿಎಂಎಸ್ ಆಯೋಜನೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದ ಗೃಹ ಸಚಿವ ಡಾ. ಜಿ.‌ಪರಮೇಶ್ವರ್, ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಎಸ್ ಎಸ್ ಮಲ್ಲಿಕಾರ್ಜುನ್ ಭಾಗಿ

ದಾವಣಗೆರೆ, ಜು. 27: ದಾವಣಗೆರೆ ಜಿಲ್ಲಾ ಛಲವಾದಿ ಮಹಾಸಭಾ ನಗರದ ಬಾಪೂಜಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ  ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಉದ್ಘಾಟಿಸಿದರು.

ಸಚಿವರು ಗಣ್ಯರೊಂದಿಗೆ  ಭಗವಾನ್ ಬುದ್ಧ, ಜಗಜ್ಯೋತಿ ಬಸವೇಶ್ವರ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್, ವೀರವನಿತೆ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಿದರು.‌    ಬಳಿಕ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಅಭಿನಂದಿಸಿದರು. ಮೈಸೂರಿನ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಎಸ್.ಎಸ್.ಮಲ್ಲಿಕಾರ್ಜುನ, ಶಾಸಕರಾದ ಬಿ.ದೇವೆಂದ್ರಪ್ಪ, ಕೆ.ಎಸ್.ಬಸವಂತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಮುಖಂಡರಾದ ಎಫ್ ಎಸ್ ಜಕ್ಕಪ್ಪನವರ್,  ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಎನ್.ರುದ್ರಮುನಿ, ಮುಖಂಡರಾದ ಹೆಚ್.ಸಿ.ನಿರಂಜನಮೂರ್ತಿ, ವಿವಿಧ ಭಾಗಗಳಿಂದ ಆಗಮಿಸಿದ್ದ ಛಲವಾದಿ ಸಮಾಜದ ಮುಖಂಡರು, ದಾವಣಗೆರೆ ಜಿಲ್ಲಾ ಸಿಎಂಎಸ್  ಪದಾಧಿಕಾರಿಗಳು ಮುಂತಾದವರು ಇದ್ದರು.

—–