ಮೈಸೂರು ದಸರಾ: ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರಿಂದ ಚಾಲನೆ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು, ಆ.22: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.         ಅವರು ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಹೇಳಿದರು.                                                      ಬಾನು ಮುಷ್ತಾಕ್ ಅವರ ಕೃತಿ ಎದೆಯ ಹಣತೆಗೆ ಬೂಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್ ಅವರು ಪ್ರಗತಿಪರ ಚಿಂತಕಿಯೂ ಆಗಿದ್ದಾರೆ. ಅವರಿಂದಲೇ ದಸರಾ ಉದ್ಘಾಟಿಸಿ, ಅವರ ಸಾಧನೆಯನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ‌ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Leave a Reply

Your email address will not be published. Required fields are marked *