ಹೊಸಪೇಟೆಯಲ್ಲಿ ಸೆ.22ರಂದು ಹಬೊ ಹಳ್ಳಿ ಜೆಸ್ಕಾಂ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ

ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿರುವ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಜೆಸ್ಕಾಂ) ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಎಚ್.ಟಿ ಮತ್ತು ಇ.ಎಚ್.ಟಿ ಗ್ರಾಹಕರ ಕುಂದುಕೊರತೆ ಸಭೆ  ಸೆ. 22ರಂದು ಸೋಮವಾರ ಬೆಳಿಗ್ಗೆ 11ಗಂಟೆಗೆ ಹೊಸಪೇಟೆಯ ಜೆಸ್ಕಾಂನ ಕಾರ್ಯ ಮತ್ತು ಪಾಲನೆ ವಿಭಾಗದ ನಗರ ವಿಭಾಗ ಕಚೇರಿಯಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿಯ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಸೂಪರಿಟೆಂಡೆಂಟ್ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಗ್ರಾಹಕರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಹಿಸಿ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ವಿನಂತಿಸಿಕೊಂಡಿದ್ದಾರೆ.
—–