ಕೊಪ್ಪಳ ವಿವಿಯಲ್ಲಿ ಸೆ.30 ರಂದು ಜರುಗುವ ದಸರಾ ಕಾವ್ಯ ಸಂಭ್ರಮದಲ್ಲಿ ಕುಲಪತಿಗಳ ಸಂಗಮ

ಕೊಪ್ಪಳ, ಸೆ. 26: ಕೊಪ್ಪಳ ವಿಶ್ವವಿದ್ಯಾಲಯ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮ ವನ್ನು ಸೆ. 30 ರಂದು ಬೆಳಿಗ್ಗೆ 10:30 ಗಂಟೆಗೆ ತಳಕಲ್ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ ಕಟ್ಟಡದ ವಿವಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಮಾರಂಭವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲಿಕಾ ಘಂಟಿ ಅವರು ಉದ್ಘಾಟಿಸುವರು.
ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.
ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಕಲ್ಯಾಣ ವಾಣಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡುವರು.
ಕುಲಪತಿಗಳ‌ ಸಂಗಮ: ಮುಖ್ಯ ಅತಿಥಿಗಳಾಗಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ರಾಯಚೂರಿನ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಶಿಕಾಂತ ಉಡಿಕೇರಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಮೇಶ ಬಿ., ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಡಾ.ವಸುಂಧರಾ ಭೂಪತಿ, ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಓಂಕಾರ ಕಾಕಡೆ ಅವರು ಉಪಸ್ಥಿತರಿರುವರು.
ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ.ಹೆಚ್.ಎಲ್.ಪುಷ್ಪಾ ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸುವರು. ಸುಮಾರು 50 ಕ್ಕೂ ಹೆಚ್ಚು ಕವಿಗಳು ಕವನ ವಾಚಿಸುವರು ಎಂದು ಕೊಪ್ಪಳ ವಿಶ್ವವಿವಿ ಪ್ರಕಟಣೆ ತಿಳಿಸಿದೆ.