Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ವಿಎಸ್ ಕೆಯು ಮಟ್ಟದ ಕಬ್ಬಡ್ಡಿ ಪಂದ್ಯಾವಳಿಗೆ ಚಾಲನೆ:  ಆಟಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸ್ಪರ್ಧೆ ಮುಖ್ಯ  -ಪ್ರಾಚಾರ್ಯ ಡಾ. ಪ್ರಹ್ಲಾದ್ ಚೌಧರಿ - Karnataka Kahale

ವಿಎಸ್ ಕೆಯು ಮಟ್ಟದ ಕಬ್ಬಡ್ಡಿ ಪಂದ್ಯಾವಳಿಗೆ ಚಾಲನೆ:  ಆಟಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸ್ಪರ್ಧೆ ಮುಖ್ಯ  -ಪ್ರಾಚಾರ್ಯ ಡಾ. ಪ್ರಹ್ಲಾದ್ ಚೌಧರಿ

ಬಳ್ಳಾರಿ, ಅ.15:ಆ ಟಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸ್ಪರ್ಧೆ ಮುಖ್ಯ  ಎಂದು ಎಸ್.ಎಸ್.ಎ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಪ್ರಹ್ಲಾದ ಚೌಧರಿ ಅವರು ತಿಳಿಸಿದರು.                                                  ನಗರದ ಶ್ರೀಮತಿ ಸರಳಾ ದೇವಿ ಸತೀಶ್ಚಂದ್ರ ಅಗರ್ವಾಲ್(ಎಸ್ಎಸ್ಎ) ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ 2025 -26 ನೇ ಸಾಲಿನ ಅಂತರ್ ಮಹಾವಿದ್ಯಾಲಯಗಳ ಪುರುಷ ಮತ್ತು ಮಹಿಳೆಯ ಕಬ್ಬಡಿ ಪಂದ್ಯಾವಳಿಗಳು ಹಾಗೂ ವಿಶ್ವವಿದ್ಯಾಲಯ ತಂಡಗಳ ಆಯ್ಕೆಯ ಪ್ರಕ್ರಿಯೆಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಜೀವನದಲ್ಲಿ ಆರೋಗ್ಯ ಪ್ರಮುಖ ಪಾತ್ರವಹಿಸುತ್ತದೆ. ಆರೋಗ್ಯ ಉತ್ತಮವಾಗಿರಲು ಆಟೋಟಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಬಳ್ಳಾರಿ ವಿಜಯನಗರ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪಂದ್ಯಾವಳಿಯಲ್ಲಿ ಉತ್ತಮ ರೈಡ್ ಗಳನ್ನು ಮಾಡುವ ಮೂಲಕ‌ಗಮನ ಸೆಳೆದರು.

     ಬಳ್ಳಾರಿ ವಿಎಸ್ಕೆ ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ.ಶಶಿಧರ್ ,ಕುರುಗೋಡು ಜಿಎಫ್ ಸಿ ದೈಹಿಕ ಶಿಕ್ಷಣ ನಿರ್ದೇಶಕ  ಪಂಪನಗೌಡ, ಕೂಡ್ಲಿಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗುರುಬಸವರಾಜ್, ಹಿರಿಯ ದೈಹಿಕ ನಿರ್ದೇಶಕ ರಾಥೋಡ್, ಆಂಗ್ಲ ವಿಭಾಗದ ಮುಖ್ಯಸ್ಥೆ ಪ್ರೊ. ಮೊನಿಕಾ ರಂಜನ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಇಸ್ಮಾಯಿಲ್ ಮಕಾಂದರ್,  ಪ್ರಾಧ್ಯಾಪಕರಾದ ಕಲ್ಯಾಣ ಬಸವ, ಹರೀಶ್, ಕಾಲೇಜಿನ ವಿವಿಧ‌ ವಿಭಾಗಗಳ  ಉಪನ್ಯಾಸಕರು,  ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

ಅಭಿನಂದನೆ: ಕಾಲೇಜಿನ ಬಾಲಕಿಯರ ಕಬಡ್ಡಿ ತಂಡವು ವಿಎಸ್ ಕೆಯುಬಿ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಯನ್ನು ಗೆದ್ದು ಚಾಂಪಿಯನ್ ಆಗಿರುವುದಕ್ಕೆ ಹರ್ಷಿಸಿರುವ ಡಾ. ಪ್ರಹ್ಲಾದ್ ಚೌಧರಿ ಅವರು ವಿಜೇತರನ್ನು ಅಭಿನಂದಿಸಿದ್ದಾರೆ.