Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ - Karnataka Kahale

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು ಅ.18: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆಯಾದ ಫೋಟೋ ಜರ್ನಲಿಸ್ಟ್ ಗಳಿಗೆ “ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ” ವಿತರಿಸಿ ಅವರು ಮಾತನಾಡಿದರು.

ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ ಎಂದರು.

ಪತ್ರಕರ್ತರು ಸತ್ಯ ಹೇಳ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಗೌರವ ತರುವುದಿಲ್ಲ ಎಂದು ಹೇಳಿದರು.

ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ ನೀವು. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ ಎಂದು ತಿಳಿಸಿದರು.

ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12 ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಡ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎಂದು ಸಿಎಂ  ಬೇಸರ ವ್ಯಕ್ತಪಡಿಸಿದರು.

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಅನುಕೂಲ ಎನ್ನುವುದನ್ನು ಯೋಚಿಸಿ ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್, ಶಾಸಕರಾದ ಹರೀಶ್ ಗೌಡ, ವಿಧಾನ‌ ಪರಿಷತ್ ಸದಸ್ಯರಾದ ಶಿವಕುಮಾರ್, ಅಸೋಸಿಯೇಷನ್ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.