Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಬಳ್ಳಾರಿ ಗುಂಪು ಘರ್ಷಣೆ: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಕೇಂದ್ರ ಸಚಿವ ಸೋಮಣ್ಣ ಒತ್ತಾಯ - Karnataka Kahale

ಬಳ್ಳಾರಿ ಗುಂಪು ಘರ್ಷಣೆ: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಕೇಂದ್ರ ಸಚಿವ ಸೋಮಣ್ಣ ಒತ್ತಾಯ

ಬಳ್ಳಾರಿ, ಜ. 4: ಗುರುವಾರ ನಗರದಲ್ಲಿ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ನಡೆದ ಘರ್ಷಣೆ, ಯುವಕನೊಬ್ಬ ಸಾವನ್ನಪ್ಪಿದ ಘಟನೆಯ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಘಟನೆಯನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಹೇಳಿದ್ದಾರೆ. ಇದು ಸರಿಯಲ್ಲ. ಹೈಕೋರ್ಟ್ ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ನಡೆಸದಿದ್ದರೆ ಸಿಬಿಐಗೆ ವಹಿಸಿ ಎಂದು ಆಗ್ರಹಿಸಿದರು.

ರಾಜ್ಯ ಸರಕಾರ ದ್ವೇಷ ಭಾಷಣ ನಿಷೇಧ ಕಾನೂನನ್ನು ತಂದಿದೆ. ಜನಾರ್ದನ ರೆಡ್ಡಿ ಮನೆಯನ್ನು ಸುಟ್ಟು ಹಾಕುವುದಾಗಿ ಹೇಳಿದ ಶಾಸಕ ಭರತ್ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳಬೇಕು‌ ಎಂದು ಸಿಎಂ ಅವರನ್ನು ಒತ್ತಾಯಿಸಿದರು.
ಭರತ್ ರೆಡ್ಡಿ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಇನ್ನೂ ರಾಜಕೀಯ ನಡವಳಿಕೆ ತಿಳಿದಿಲ್ಲ ಎಂದು ತೋರುತ್ತದೆ. ರೆಡ್ಡಿ ಆರು ತಿಂಗಳು ನನ್ನ ಬಳಿಗೆ ಬಂದರೆ, ನಾನು ತರಬೇತಿ ನೀಡುತ್ತೇನೆ ಎಂದು ಹೇಳಿದರು.
ಭರತ್ ರೆಡ್ಡಿ ಯಾವ ಶಾಲೆಯಲ್ಲಿ ಓದಿದ್ದಾರೋ ಗೊತ್ತಿಲ್ಲ, ಅವರ ಮಾತಿನಲ್ಲಿ ಸಂಯಮವಿಲ್ಲ. ದ್ವೇಷದ ಮಾತುಗಳು ಹೊರಬರುವುದು ಸರಿಯಲ್ಲ.
ಜನಾರ್ದನ ರೆಡ್ಡಿ ಅವರು ಕೇಂದ್ರ ಸರಕಾರಕ್ಕೆ
ಝಡ್-ಪ್ಲಸ್ ಭದ್ರತೆ ಮನವಿ ಸಲ್ಲಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ ಅವರು ಕೇಂದ್ರ ಗೃಹ ಸಚಿವರೊಂದಿಗೆ ಮಾತನಾಡುವುದಾಗಿ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಳ್ಳಾರಿ ಜಿಲ್ಲೆಯೇ ಕಾರಣ, ಈ ಜಿಲ್ಲೆಯ ಘನತೆ, ಇತಿಹಾಸ ರಕ್ಷಿಸುವ ಜತೆಗೆ ಮತ್ತು ಜನರ ಆಶಯಗಳಿಗೆ ಸ್ಪಂದಿಸಬೇಕು ಎಂದು ಸಿಎಂ ಅವರಿಗೆ ಹೇಳಿದರು.
ರಾಮಾಯಣ ಬರೆದ ಶ್ರೀ ಮಹರ್ಷಿ ವಾಲ್ಮೀಕಿಯವರ ಪ್ರತಿಮೆಯ ಹೆಸರಿನಲ್ಲಿ ನೀವು ಪಾಪದ ಕೆಲಸ ಮಾಡುತ್ತಿದ್ದೀರಿ, ಆ ಪಾಪದ ಕೆಲಸ ನಿಮ್ಮನ್ನು ಬಿಡುವುದಿಲ್ಲ, ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು, ನೀವು ಸದ್ಗುಣಶೀಲ ವ್ಯಕ್ತಿಯ ಹೆಸರಿನಲ್ಲಿ ಪಾಪದ ಕೆಲಸ ಮಾಡುತ್ತಿದ್ದೀರಿ” ಎಂದು ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು.

ನಾವು ಇಲ್ಲಿ ಶಾಶ್ವತವಾಗಿ ಉಳಿಯಲು ಬಂದಿಲ್ಲ, ಕೆಲಸ ಮಾಡಿ ಹೊರಡಬೇಕು ಅಷ್ಟೇ ಎಂದು‌ ಮಾರ್ಮಿಕವಾಗಿ‌ ನುಡಿದ ಕೇಂದ್ರ ಸಚಿವರು ಅಂದು ಶ್ರೀರಾಮುಲು ಸರಿಯಾದ ಸಮಯಕ್ಕೆ ಬರದೇ ಇರದ್ದಿದ್ದರೆ ಜನಾರ್ದನ ರೆಡ್ಡಿ ಮತ್ತು ಅವರ ಕುಟುಂಬದ ಪರಿಸ್ಥಿತಿ ಏನಾಗುತ್ತಿತ್ತು, 45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ದುರಂತವನ್ನು ನಾನು ನೋಡಿಲ್ಲ ಎಂದು‌ ಅಚ್ಚರಿ‌ ವ್ಯಕ್ತಪಡಿಸಿದರು.
ಘಟನೆಯಲ್ಲಿ ಮೃತಪಟ್ಟ ರಾಜಶೇಖರ ರೆಡ್ಡಿ ಕುಟುಂಬದ ಸ್ಥಿತಿ ಅರಿಯಲು ಅವರ ಕುಟುಂಬದವರೊಂದಿಗೆ ಮಾತನಾಡಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ
ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು, ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ, ಎಂ.ಎಸ್ ಸೋಮಲಿಂಗಪ್ಪ, ಮಾಜಿ ಸಂಸದ ಸಣ್ಣ ಫಕೀರಪ್ಪ ಮತ್ತಿತರರು ಉಪಸ್ಥಿತರಿದ್ದರು.