
ಬಳ್ಳಾರಿ,ಜ.8: ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಗುಪ್ತವಾರ್ತೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಡಾ.ಸುಮನ್ ಡಿ.ಪೆನ್ನೇಕರ್ ಅವರು 2013 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ತಾತ್ಕಾಲಿಕವಾಗಿ ಬಳ್ಳಾರಿ ಎಸ್ಪಿಯಾಗಿ ನಿಯೋಜನೆಗೊಂಡಿದ್ದ ಚಿತ್ರದುರ್ಗ ಎಸ್‌ಪಿ ರಂಜೀತ್ ಕುಮಾರ್ ಬಂಡಾರು ಅವರು ಅಧಿಕಾರ ಹಸ್ತಾಂತರಿಸಿದರು.
—–
