ತೆಕ್ಕಲಕೋಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟದ ಸಾಧನೆ:  ಖೇಲೊ ಇಂಡಿಯಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗೆ ಆಯ್ಕೆ


ತೆಕ್ಕಲಕೋಟೆ: ಸ್ಥಳೀಯ ಶ್ರೀಮತಿ ಹೊನ್ನುರಮ್ಮ ದಿ.ಸಿದ್ದಪ್ಪ ಪ್ರಥಮ ದರ್ಜೆ ಕಾಲೇಜಿನ ಬಿಎ ಪ್ರಥಮ ವರ್ಷದ ವಿದ್ಯಾರ್ಥಿ ಮೌನೇಶ.ಡಿ ಕುಸ್ತಿ ಕ್ರೀಡೆಯಲ್ಲಿಉತ್ತಮ ಸಾಧನೆ ಮಾಡುವ ಮೂಲಕ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದಿಂದ ರಾಷ್ಟ್ರೀಯ ಮಟ್ಟದ ಖೇಲೊ ಇಂಡಿಯಾ ಪಂದ್ಯಾವಳಿಗೆ ಆಯ್ಕೆ ಆಗಿದ್ದಾನೆ. ಪಂಜಾಬ್‌ ರಾಜ್ಯದ ಚಂಡೀಗಡನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿರಾಜ್ಯದಿಂದ 130 ಸ್ಪರ್ಧೆಗಳು ಭಾಗವಹಿಸಿದ್ದರು.                                            ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿನಡೆದ ಅಂತರ್‌ ಕಾಲೇಜುಗಳ ವಿಶ್ವ ವಿದ್ಯಾಲಯದ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.

ಡಾ.ಮಲ್ಲಿಕಾರ್ಜುನ ಮೋಕ

ವಿದ್ಯಾರ್ಥಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಾಂಶುಪಾಲರು, ಹೈದರಬಾದ್‌ ಕರ್ನಾಟಕ ಪ್ರದೇಶದ ವಿದ್ಯಾರ್ಥಿಗಳು ಕ್ರೀಡೆಯಲ್ಲಿಹೆಚ್ಚಿನ ಸಾಧನೆ ಮಾಡಲಿ. ವಿದ್ಯಾರ್ಥಿ ಮೌನೇಶ.ಡಿ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿಜಯಗಳಿಸಲು ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.