Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ: ಡಿಸಿ ನಾಗೇಂದ್ರ ಪ್ರಸಾದ್.ಕೆ ಆದೇಶ - Karnataka Kahale

ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ: ಡಿಸಿ ನಾಗೇಂದ್ರ ಪ್ರಸಾದ್.ಕೆ ಆದೇಶ

ಬಳ್ಳಾರಿ,ಜ.12: ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜ.12 ರಿಂದ 20 ವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿವೆ.                                                           ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
—–