Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ದೆಹಲಿ ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ - Karnataka Kahale

ದೆಹಲಿ ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ

ಬೆಂಗಳೂರು: ದೆಹಲಿಯಲ್ಲಿ ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ಪೊಲೀಸರು ನಡೆಸಿರುವ ದಾಳಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.                                    ಈ ಕ್ರಮವು ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತದ್ದಾಗಿದ್ದು, ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೂ ವಿರುದ್ಧವಾಗಿದೆ.
ಪತ್ರಕರ್ತರ ಖಾಸಗಿ ವಸ್ತುಗಳನ್ನು ತೆಗೆದುಕೊಳ್ಳಲು ಅವಕಾಶ ನೀಡದೆ, ಮಹಿಳೆ ಎನ್ನುವುದನ್ನೂ ಲೆಕ್ಕಿಸದೇ ನಡೆಸಿದ ವರ್ತನೆ ಅಕ್ಷಮ್ಯ ಮತ್ತು ಖಂಡನೀಯ.

ಶಿವಾನಂದ ತಗಡೂರು

ಈ ಘಟನೆ ಮಾಧ್ಯಮಗಳ ಮೇಲೆ ಅನಗತ್ಯ ಒತ್ತಡ ಹೇರಲು ಪ್ರಯತ್ನಿಸಿರುವುದನ್ನು ಸ್ಪಷ್ಟಪಡಿಸುತ್ತದೆ.
ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ