
ಬೆಂಗಳೂರು/ಬಳ್ಳಾರಿ, ಜೂ.7: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡ ಬಿ.ಕೆ. ಹರಿಪ್ರಸಾದ್ ಅವರನ್ನು ಬಳ್ಳಾರಿ ನಗರ ಶಾಸಕ ನಾರಾ ಭರತ್ ಅಭಿನಂದಿಸಿ, ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ಭವಿಷ್ಯದ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು ಎಂದು ಅವರು ಶಾಸಕರು ತಿಳಿಸಿದ್ದಾರೆ.
ಹೊಸದಾಗಿ ನೇಮಕಗೊಂಡ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು ಮತ್ತು ಅವರ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷವು ಇನ್ನಷ್ಟು ಬಲಪಡುತ್ತದೆ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ವಿಶೇಷವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಅಭಿವೃದ್ಧಿ ಮತ್ತು ಜನಸೇವೆಯ ಹೊಸ ಅಧ್ಯಾಯ ಆರಂಭವಾಗುತ್ತದೆ ಎಂಬ ವಿಶ್ವಾಸವನ್ನು ಶಾಸಕ ನಾರಾ ಭರತ್ ರೆಡ್ಡಿ ವ್ಯಕ್ತಪಡಿಸಿದ್ದಾರೆ.
ಭೇಟಿ ವೇಳೆ ಬಳ್ಳಾರಿ ಜಿಲ್ಲೆಯ ರಾಜಕೀಯ ಪರಿಸ್ಥಿತಿ, ಪಕ್ಷದ ಸಂಘಟನಾತ್ಮಕ ಬಲವರ್ಧನೆ, ಅಭಿವೃದ್ಧಿ ಯೋಜನೆಗಳು ಮತ್ತು ಭವಿಷ್ಯದ ಕಾರ್ಯಯೋಜನೆಗಳ ಬಗ್ಗೆ ವಿವರವಾದ ಚರ್ಚೆ ನಡೆಯಿತು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಸಬಲಗೊಳಿಸುವುದು ಮತ್ತು ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವುದು ಈ ಚರ್ಚೆಯ ಮುಖ್ಯ ಅಂಶಗಳಾಗಿದ್ದವು ಎಂದು ಶಾಸಕರು ತಿಳಿಸಿದ್ದಾರೆ.
ಬಿ.ಕೆ. ಹರಿಪ್ರಸಾದ್ ಅವರ ಅನುಭವ ಮತ್ತು ನಾಯಕತ್ವವು ಪಕ್ಷಕ್ಕೆ ಮಾರ್ಗದರ್ಶನವಾಗುತ್ತದೆ ಎಂದು ನನ್ನ ಭಾವನೆ, ಅವರ ಯಶಸ್ವಿ ನಾಯಕತ್ವಕ್ಕೆ ಶುಭಕಾಮನೆ ಸಲ್ಲಿಸಿದೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ.
