ಬೆಳಗಾವಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನಿಯೋಗ: ಸಕಾರಾತ್ಮಕ ಸ್ಪಂದನೆ

ಬೆಳಗಾವಿ: ನಗರದ ಸುವರ್ಣ ಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನಿಯೋಗವು ಭೇಟಿ ಮಾಡಿ ಅಭಿನಂದಿಸಿತು.

ಪ್ರಸ್ತುತ ಅತಿಥಿ ಉಪನ್ಯಾಸಕರುಗಳ ಸಮಸ್ಯೆಗಳ ಕುರಿತು ಚರ್ಚಿಸಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಸೇವಾ ಭದ್ರತೆ ಒದಗಿಸಬೇಕೆಂದು ಸಿಎಂ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರ ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ  ಮುಖ್ಯಮಂತ್ರಿಗಳು ಶೀಘ್ರ  ಸಭೆ ಕರೆಯಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರು ಹಾಗೂ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಹಾಗೂ ಬೆಳಗಾವಿ ಜಿಲ್ಲೆಯ ಅತಿಥಿ ಉಪನ್ಯಾಸಕರ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *