ಬಳ್ಳಾರಿಯಲ್ಲಿ  ಜು. 24ರಂದು ಜೀಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್ ಶೋ ಆಡಿಷನ್

ಬಳ್ಳಾರಿ, ಜು.22:  ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಡ್ಯಾನ್ಸಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ . ಮಕ್ಕಳಿಂದ, ಸೆಲೆಬ್ರಿಟಿ ಗಳ ವರೆಗೆ ಎಲ್ಲರೂ ಈ ಶೋನಲ್ಲಿ ಭಾಗವಹಿಸಿ ಜನರನ್ನು ಮನರಂಜಿಸಿದ್ದಾರೆ. ಈಗ ಕರ್ನಾಟಕದ ಅಮ್ಮಂದಿರ ಸರಣಿ. ಕನ್ನಡಿಗರನ್ನು ಕುಣಿಸಿ, ಮನರಂಜಿಸಲು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್ ಶೋ ಅತೀ ಶೀಘ್ರದಲ್ಲಿ ಶುರುವಾಗಲಿದ್ದು ಇದರ ಆಡಿಷನ್ ಜು. 24 ರಿಂದ ನಡೆಯಲಿದೆ.
ಮನೆ, ಆಫೀಸ್, ಗಂಡ, ಮಕ್ಕಳು, ಅತ್ತೆ, ಮಾವ ಹೀಗೆ ಸದಾ ಪರರಿಗೋಸ್ಕರ ದುಡಿಯುವ ಅಮ್ಮಂದಿರಿಗೆ ಇದೊಂದು ಉತ್ತಮ ಅವಕಾಶ, ಡ್ಯಾನ್ಸ್ ಬಗ್ಗೆ ಆಸಕ್ತಿ ಇರುವ, ಚೆನ್ನಾಗಿ ಹೆಜ್ಜೆ ಹಾಕಬಲ್ಲ ಅಮ್ಮಂದಿರು ಈ ಆಡಿಷನ್ ನಲ್ಲಿ ಭಾಗವಹಿಸಬಹುದಾಗಿದೆ. ಹಾಗೆಯೇ ಈ ಆಡಿಷನ್ ನಲ್ಲಿ ಭಾಗವಹಿಸಲು ಪಾಸ್ಪೋರ್ಟ್ ಸೈಜ್ ಫೋಟೋ, ಅಡ್ರೆಸ್ ಪ್ರೂಫ್ ಜೆರಾಕ್ಸ್ ಕಡ್ಡಾಯ. ಜು. 24  ಶುಕ್ರವಾರದಂದು ಬೆ. 9 ಗಂಟೆಗೆ,ರಾಷ್ಟ್ರೋತ್ಥಾನ, ವಿದ್ಯಾಕೇಂದ್ರ, ಮೂರನೇ ಕ್ರಾಸ್, ಕುವೆಂಪುನಗರ,ಬಳ್ಳಾರಿ. ಇಲ್ಲಿ ಆಡಿಷನ್ ನಡೆಯಲಿದೆ.
ವಿಶೇಷ ಸೂಚನೆ: ಈ ಆಡಿಷನ್ ನಲ್ಲಿ ಭಾಗವಹಿಸಲು ಜೀ ಕನ್ನಡ ವಾಹಿನಿ ಯಾವುದೇ ಶುಲ್ಕವನ್ನು ತೆಗೆದುಕೊಳ್ಳುವುದಿಲ್ಲ.
ಅಮ್ಮಂದಿರಿಗೆ ಸಿಕ್ಕಿದೆ ಹೆಜ್ಜೆ ಹಾಕೋ ಅವಕಾಶ; ತಡ ಯಾಕೆ, ಆಡಿಷನ್ ನಲ್ಲಿ ಭಾಗವಹಿಸಿ ಮುಂದಿನ ಸುತ್ತಿಗೆ ಆಯ್ಕೆಯಾಗಿ!

Leave a Reply

Your email address will not be published. Required fields are marked *