
ಹಗರಿಬೊಮ್ಮನಹಳ್ಳಿ , ಜು.24: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಜು.24ರಂದು ಬೆಳಗ್ಗೆ 10-30ಕ್ಕೆ ಪಟ್ಟಣದ ಕನ್ಯಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಪತ್ರಿಕಾ ದಿನಾಚರಣೆ ಸಮಾರಂಭ ಹಮ್ಮಿಕೊಂಡಿದೆ.
ಶಾಸಕ ಕೆ. ನೇಮಿರಾಜ್ ನಾಯ್ಕ್ ಕಾರ್ಯಕ್ರಮ ಉದ್ಘಾಟನೆ ನೀಡಲಿದ್ದು, ತಾಲೂಕ ಸಂಘದ ಅಧ್ಯಕ್ಷ ಬಿ. ಕೆ.ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ಬೀದರ್ ಜಿಲ್ಲಾ ಪ್ರಜಾವಾಣಿ ವರದಿಗಾರ ಶಶಿಕಾಂತ್ ಶಂಬೆಳ್ಳೆ ನೀಡಲಿದ್ದಾರೆ. ವಿಶೇಷ ಆಹ್ವಾನಿತಾರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪಿ ಸತ್ಯನಾರಾಯಣ ,ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಕವಿತ ಆರ್,ತಾ ಪಂ ಇ ಒ ಪಾಲಯ್ಯನ ಕೋಟೆ ವಿಶ್ವನಾಥ,ಪುರಸಭೆ ಮುಖ್ಯಾಧಿಕಾರಿ ಎಂ ಕೆ ಮುಗಳಿ, ಸಂಘದ ರಾಜ್ಯ ಸಮಿತಿ ಸದಸ್ಯ ವೆಂಕೋಬ ನಾಯಕ್, ಪ್ರಧಾನ ಕಾರ್ಯದರ್ಶಿ ಕೆ. ಲಕ್ಷ್ಮಣ, ಉಪಾಧ್ಯಕ್ಷರಾದ ಉಜ್ಜಿನಿ ರುದ್ರಪ್ಪ, ರಾಜು, ಜಿಲ್ಲಾ ಸಮಿತಿ ಸದಸ್ಯ ಸಿ.ಶಿವಾನಂದ್ ಇತರರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಬಿ.ಕೆ.ವಿಶ್ವನಾಥ, ಪ್ರಧಾನ ಕಾರ್ಯದರ್ಶಿ ರಾಜಾವಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
