
ಬಳ್ಳಾರಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಗಾಂಧಿ ಭವನದಲ್ಲಿ ಜು. 26 ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಂಡಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎನ್. ವೀರಭದ್ರಗೌಡ ಅವರು ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಸಮಾಜಮುಖಿ ಮಾಸ ಪತ್ರಿಕೆಯ ಸಂಪಾದಕ ಚಂದ್ರಕಾಂತ ವಡ್ಡು ಅವರು ಉದ್ಘಾಟಿಸುವರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಕೆ.ನಿಂಗಜ್ಜ ಅವರು ಮಾಧ್ಯಮ ಅಕಾಡೆಮಿ ಮತ್ತು ಪತ್ರಿಕೋದ್ಯಮ ಸಂಬಂಧ ಕುರಿತು ಮಾತನಾಡಲಿದ್ದಾರೆ. ಸಂಘದ ಜಿಲ್ಲಾ ಅಧ್ಯಕ್ಷ ಎನ್.ವೀರಭದ್ರಗೌಡ ಅಧ್ಯಕ್ಷತೆವಹಿಸಲಿದ್ದಾರೆ.

ಹಲವು ವರ್ಷಗಳಿಂದ ನಗರದಲ್ಲಿ ಪತ್ರಿಕೆ ವಿತರಣೆ ಮಾಡುತ್ತಿರುವ ಶಿವಾಜಿ ಮರಾಟಿ ರಾಜಶೇಖರ, ಸಿರುಗುಪ್ಪದ ಪಿ.ಹುಸೇನ್ ಸಾಬ್ ಮತ್ತು ಕಂಪ್ಲಿಯ ವೈ.ಬಿ.ಆನಂದರಾವ್ ಅವರನ್ನು ಡಿಸಿ ಕೆ.ನಾಗೇಂದ್ರಪ್ರಸಾದ್, ಎಸ್ಪಿ ಡಾ.ಸುಮನ್ ಪನ್ನೇಕರ್ ಮತ್ತು ಜಿಪಂ ಸಿಇಓ ಮಹಮ್ಮದ್ ಹಾರೀಸ್ ಸುಮೇರ್ ಅವರು ಸನ್ಮಾನಿಸಿ ಗೌರವಿಸಲಿದ್ದಾರೆ.
ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಘದ ರಾಜ್ಯಾಧ್ಯಕ್ಷ ಶಿವನಂದ ತಗಡೂರು, ಪ್ರಧಾನ ಕಾರ್ಯದರ್ಶಿ, ಜಿ.ಸಿ.ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು ಅವರಿಂದ ನಡೆಯಲಿದೆ.
ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕರಾಂ ಅವರು ಉಪಸ್ಥಿತರಿರಲಿದ್ದಾರೆಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
