
ಬಳ್ಳಾರಿ, ಆ.15: ನಗರದ 23ನೇ ವಾರ್ಡ್‌ನ ಮಹಾನಂದಿ ಕೊಟ್ಟಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
ಸಂವಿಧಾನದ ಶಿಲ್ಪಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬಳಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕಿ ಸಿದ್ದಲಿಂಗಮ್ಮ.ಎಲ್ ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ವಿದ್ಯಾರ್ಥಿಗಳು ಅರಿತುಕೊಂಡು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಉಪೇಂದ್ರ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೇಶಭಕ್ತಿ, ಶಿಸ್ತು ಹಾಗೂ ಸಂವಿಧಾನದ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಿ, ಉತ್ತಮ ನಾಗರಿಕರಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು. ಮುಖ್ಯ ಅತಿಥಿ, ಹಿರಿಯ ಸಾಹಿತಿ ಎನ್.ಡಿ ವೆಂಕಮ್ಮ ಅವರು ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶದ ಇತಿಹಾಸವನ್ನು ಅರಿತುಕೊಳ್ಳಬೇಕು.
ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಮಾನವೀಯತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದರು. ಶಾಲೆಯ ಸಹ ಶಿಕ್ಷಕಿ ಪ್ರಮೀಳಾಬಾಯಿ.ಎಂ. ಅವರು ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಶಿಸ್ತು, ದೇಶಪ್ರೇಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ದೇಶದ ಉತ್ತಮ ನಾಗರಿಕರಾಗಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಉಪೇಂದ್ರ, ಹಿರಿಯ ಸಾಹಿತಿ ಎನ್.ಡಿ. ವೆಂಕಮ್ಮ, ಶಾಲೆಯ ಮುಖ್ಯ ಶಿಕ್ಷಕಿ ಸಿದ್ದಲಿಂಗಮ್ಮ.ಎಲ್ ,
ಸಹ ಶಿಕ್ಷಕಿ ಪ್ರಮೀಳಾಬಾಯಿ.ಎಂ , ಅತಿಥಿ ಶಿಕ್ಷಕಿ ಮೈತ್ರಿ , ಅನಿತ ಹೆಚ್.ವೈ ಶಶಿಕಳಾ.ಎಂ , ಅಡುಗೆ ಸಹಾಯಕಿಯರಾದ ಗೌರಮ್ಮ ಹಾಗೂ ರುದ್ರಮ್ಮ, ಶಾಲೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಮತ್ತು ನಗರದ ಹಿರಿಯ ಮುಖಂಡರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
