ರಂಗಕಲಾವಿದ ಪುರುಷೋತ್ತಮ  ಹಂದ್ಯಾಳ್ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ  ಪ್ರದಾನ


ಬೆಂಗಳೂರು, ಸೆ. 23: ಬಳ್ಳಾರಿಯ ರಂಗ ಕಲಾವಿದ, ರಂಗ ಸಂಘಟಕ ಪುರುಷೋತ್ತಮ ಹಂದ್ಯಾಳ್ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಅವರು ಪ್ರದಾನ ಮಾಡಿದರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಉಮಾಶ್ರೀ ಅವರು,  “ರಂಗಭೂಮಿ ಯಾವ ಕಾಲಕ್ಕೂ ತನ್ನ ಜೀವಂತಿಕೆಯನ್ನು ಕಳೆದುಕೊಳ್ಳುವುದಿಲ್ಲ. ನಾನೂ ಕೂಡ ರಂಗಭೂಮಿ ಕಲಾವಿದೆಯಾಗಿ ಬೆಳೆದು ಈ ಎತ್ತರದ ಸ್ಥಾನಕ್ಕೆ   ಬಂದಿದ್ದೇನೆ ಎಂದು ತಿಳಿಸಿದರು.      ರಂಗಭೂಮಿಯ ಮೂಲಕ ಬೆಳೆದು ಬಂದಿರುವ ಎಲ್ಲ  ಕಲಾವಿದರಿಗೂ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆಗಳು ಎಂದು ಹೇಳಿದರು.

ಜೀವವಮಾನ ಸಾಧನೆಗಾಗಿ ಹಿರಿಯ ನಟ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಡಾ. ಕೆ.ವಿ. ನಾಗರಾಜಮೂರ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ  ಪ್ರೊ. ಎಲ್.ಎನ್. ಮುಕುಂದರಾಜ್, ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ಕೆ. ಎಂ. ವಸುಂಧರಾ ಹಾಗೂ ರಿಜಿಸ್ಟ್ರಾರ್ ನೀಲಮ್ಮ,  ಶೇಖ್ ಮಾಸ್ತರ  ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ  ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳು ಹಾಗೂ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

Leave a Reply

Your email address will not be published. Required fields are marked *