ಬಳ್ಳಾರಿ. ಸೆ. 25 : ತಾಲೂಕು ಉಪ್ಪಾರ ನೌಕರರ ಹಾಗೂ ವೃತ್ತಿಪರ ನೌಕರರ ಸಂಘ (ರಿ), ಬಳ್ಳಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಸಹಯೋಗದಲ್ಲಿ ನಗರದ ಬಿ.ಗೋನಾಳ್ ಹತ್ತಿರದ ಮಣಿಕಂಠ ನಗರದ ಭಗೀರಥ ವಿದ್ಯಾರ್ಥಿ ನಿಲಯ ಆವರಣದಲ್ಲಿ ನಾಳೆ (ಸೆ. 27)ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷರಾದ ಉಪ್ಪಾರ್ ಮಲ್ಲಪ್ಪ ತಿಳಿಸಿದ್ದಾರೆ.
ಬೆ. 10-00 ಗಂಟೆಯಿಂದ ಮಧ್ಯಾಹ್ನ 1-00 ಗಂಟೆಯವರೆಗೆ ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 9 ರ ಭಗೀರಥ ವಿದ್ಯಾರ್ಥಿ ನಿಲಯ, ಅಯ್ಯಪ್ಪ ದೇವಸ್ಥಾನ ಹತ್ತಿರದಲ್ಲಿ ನಡೆಯಲಿರುವ ಈ ಆರೋಗ್ಯ ತಪಾಸಣಾ ಶಿಬಿರಕ್ಕೆ ಬಳ್ಳಾರಿ ನಗರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಪ್ರಯೋಜನ ಪಡೆಯಬೇಕೆಂದು ಸಂಘದ ವತಿಯಿಂದ ಮನವಿ ಮಾಡಲಾಗಿದೆ. ಶಿಬಿರಕ್ಕೆ ಆಗಮಿಸುವ ಶಿಬಿರಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಉಪ್ಪಾರ್ ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ
ಮೊ: 99644 42222, 99021 91799, 94839 80470, 80504 33353, 84314 35977, 99166 12136 ಸಂಪರ್ಕಿಸಬಹುದು ಎಂದು ಕೋರಿದ್ದಾರೆ.
