ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪುರುಷೋತ್ತಮ ಹಂದ್ಯಾಳ್ ಗೆ ಸನ್ಮಾನ

ಬಳ್ಳಾರಿ, ಅ. 2: ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ರಂಗಭೂಮಿ ಕಲಾವಿದ ಪುರುಷೋತ್ತಮ ಹಂದ್ಯಾಳು ಅವರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಗುರುವಾರ ಸನ್ಮಾನಿಸಿ ಗೌರವಿಸಿತು.

ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು, ಹಂದ್ಯಾಳು ಪುರುಷೋತ್ತಮ ಅವರನ್ನು ಸನ್ಮಾನಿಸಿ, ಅಭಿನಂದಿಸಿ, ಕಲೆ, ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಇವರ ಸೇವೆ ಅನನ್ಯ ಎಂದು ಶ್ಲಾಘಿಸಿದರು.

ಪುರುಷೋತ್ತಮ ಹಂದ್ಯಾಳು ಅವರು, ಶ್ರೀ ಮಹಾದೇವ ತಾತ ಕಲಾಸಂಘವನ್ನು ಸ್ಥಾಪಿಸಿ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾಗಿ, ರಾಘವ ಮೆಮೋರಿಯಲ್ ಅಸೋಸಿಯೇಷನ್ ಹಾಗೂ ಬಳ್ಳಾರಿ ಜಿಲ್ಲಾ ವಿವಿಧ ಸಂಘ-ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತ ಗಿರಿಧರ್, ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಖಜಾಂಚಿಗಳಾದ  ಸಿ.ಎಸ್. ಸತ್ಯನಾರಾಯಣ, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಸಮಿತಿಗಳ ಅಧ್ಯಕ್ಷರು, ವಿಶೇಷ ಆಹ್ವಾನಿತರು ಹಾಗೂ ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *