ಬಳ್ಳಾರಿ, ಅ.7: ರಾಜ್ಯ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಬುಧವಾರ ತಾಲೂಕಿನ ಬಿ. ಬೆಳಗಲ್ ಗ್ರಾಮಕ್ಕೆ ಭೇಟಿ ನೀಡಿ, ಮಳೆ ಕೊರತೆಯಿಂದ ಹಾನಿಗೀಡಾಗಿರುವ ತೊಗರಿ ಹಾಗೂ ಸಜ್ಜೆ ಬೆಳೆಗಳ ಜಮೀನುಗಳನ್ನು ಪರಿಶೀಲಿಸಿದರು.

ಈ ವೇಳೆ ಮಳೆಯ ಅಭಾವದಿಂದ ತೊಗರಿ ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆಯಾಗದೆ ಕುಂಠಿತಗೊಂಡಿರುವುದು ಹಾಗೂ ಸಜ್ಜೆ ಬೆಳೆ ಸಂಪೂರ್ಣ ಒಣಗಿ ಹೋಗಿರುವುದನ್ನು ವೀಕ್ಷಿಸಿದರು.

ರೈತರಾದ ಮಲ್ಲಿಕಾರ್ಜುನಗೌಡ ಹಾಗೂ ತಿಪ್ಪೇರುದ್ರಪ್ಪ ಅವರೊಂದಿಗೆ ನೇರವಾಗಿ ಮಾತಿಗಿಳಿದು ಬೆಳೆ ನಷ್ಟ ಹಾಗೂ ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಬರ ಪರಿಸ್ಥಿತಿಯಿಂದ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ತಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಳೆ ಹಾನಿಯ ಮೌಲ್ಯಮಾಪನದ ಆಧಾರದ ಮೇಲೆ ಅಗತ್ಯ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದು ಈ ವೇಳೆ ಡಾ. ಪರಮೇಶ್ವರ್ ಅವರು ರೈತರಿಗೆ ಭರವಸೆ ನೀಡಿದರು.

 

Leave a Reply

Your email address will not be published. Required fields are marked *