ಮಡಿಕೇರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ. 2 ಹಾಗೂ 3 ರಂದು ಮಡಿಕೇರಿಯಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ ಕಾರ್ಯಕ್ರಮ ಅ.12 ರಂದು ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ತಿಳಿಸಿದ್ದಾರೆ.
ಸಿದ್ದಾಪರ ಸಮೀಪದ ಕರಡಿಗೋಡು ಗ್ರಾಮದ ಇವಾಲ್ವ್ ಬ್ಯಾಕ್ ರೆಸಾರ್ಟ್ ನಲ್ಲಿ ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರುಗಳು ಜಂಟಿಯಾಗಿ ಟ್ರೋಫಿ ಅನಾವರಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ಸಮಿತಿ ನಿರ್ದೇಶಕಿ ಬಿ.ಆರ್. ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಎಸ್.ಎನ್.ಡಿ.ಪಿ. ಅಧ್ಯಕ್ಷ ವಿ.ಕೆ. ಲೋಕೇಶ್, ಕ್ರೀಡಾ ಸಮಿತಿ ಸಂಚಾಲಕ ಸಂತೋಷ್ ರೈ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
