ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ

ನವದೆಹಲಿ, ಅ.12: ಕರ್ನಾಟಕದ ನೂತನ ರಾಜ್ಯಪಾಲರಾಗಿ ಹರಿಯಾಣ ಮೂಲದ ಡಾ.ಸುಧಾ ಯಾದವ್ ಅವರನ್ನು ನೇಮಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.

ಗಡಿಭದ್ರತಾ ಪಡೆಯ ಡೆಪ್ಯುಟಿ ಕಮಾಂಡೆಂಟ್, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿರುವ ಯೋಧ ಸುಖ್‌ಬೀರ್‌ ಸಿಂಗ್ ಯಾದವ್ ಅವರ ಪತ್ನಿಯಾಗಿರುವ ಸುಧಾ, ಶೈಕ್ಷಣಿಕ ಸಂಶೋಧನೆಯಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.

1999 ರಿಂದ 2004 ರವರೆಗೆ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ 13ನೇ ಲೋಕಸಭೆಯ ಸದಸ್ಯೆಯಾಗಿ ಆಯ್ಕೆಯಾಗಿದ್ದರು.

ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ್ದ ಅವರು ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರು.

Leave a Reply

Your email address will not be published. Required fields are marked *