ಬಳ್ಳಾರಿ,ನ. 7: ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಾದ್ಯಂತ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ ಹಾಗೂ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
