ಹಿರಿಯ ಪತ್ರಕರ್ತ ಸಿ.ಜಿ. ಹಂಪಣ್ಣ, ಚಿಂತಕ ಡಾ. ಸಿ. ಚನ್ನಬಸವಣ್ಣ ಅವರಿಗೆ ಕ್ರಿಯಾಶೀಲ ಶಿಕ್ಷಕರ ವೇದಿಕೆಯಿಂದ ಸನ್ಮಾನ

 

ಡಾ. ಸಿ. ಚನ್ನಬಸವಣ್ಣ ಅವರಿಗೆ ಗೌರವ ಸನ್ಮಾನ

ಬಳ್ಳಾರಿ, ನ. 22: ಬಳ್ಳಾರಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತ, ಸಾಹಿತಿ ಸಿ.ಜಿ. ಹಂಪಣ್ಣ ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಇತ್ತೀಚೆಗೆ ಗೌರವ ಡಾಕ್ಟರೇಟ್ ಪದವಿ ಪಡೆದಿರುವ ಲೋಹಿಯಾ ಪ್ರಕಾಶನದ ಸಂಸ್ಥಾಪಕ, ಚಿಂತಕ ಡಾ. ಸಿ. ಚನ್ನಬಸವಣ್ಣ ಅವರನ್ನು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆಯ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ಭಾನುವಾರ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಸಾಮಾಜಿಕ-ಸಾಂಸ್ಕೃತಿಕ ಕ್ಷೇತ್ರಗಳಿಗೆ ಗಣನೀಯ ಕೊಡುಗೆ ನೀಡಿರುವ ಇಬ್ಬರು ಗಣ್ಯರ ಸಾಧನೆಯನ್ನು ಗುರುತಿಸಿ ಈ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ರವಿಚೇಳ್ಳಗುರ್ಕಿ, ಕನ್ನಡಪ್ರಭ ದಿನಪತ್ರಿಕೆಯ ವಿಶೇಷ ವರದಿಗಾರ ಕೆ.ಎಂ. ಮಂಜುನಾಥ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಸಿ. ಮಂಜುನಾಥ್, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳ್, ವೇದಿಕೆಯ ಪ್ರಧಾನ ಕಾರ್ಯದರ್ಶಿ ಶ್ರೀಧರ ಎಂ., ಬಳ್ಳಾರಿ ತಾಲೂಕು ಘಟಕದ ಅಧ್ಯಕ್ಷ ಕರಿಯಪ್ಪ ಸಿ. ಹಾಗೂ ಉಭಯ ಗಣ್ಯರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *