ಬಳ್ಳಾರಿ ನಗರದ ಒಳಚರಂಡಿ ಯೋಜನೆಗೆ 250ಕೋಟಿ ರೂ.ಮೀಸಲಿಡಲು ಸಚಿವ ಭೈರತಿ ಅವರೊಂದಿಗೆ ಶಾಸಕ ಸೋಮಶೇಖರ್ ರೆಡ್ಡಿ ಚರ್ಚೆ

ಬಳ್ಳಾರಿ: ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರನ್ನು ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಅವರು ಬುಧವಾರ ಭೇಟಿ ಮಾಡಿದರು.
ಸೋಮಶೇಖರ್ ರೆಡ್ಡಿ ಅವರು ಬಳ್ಳಾರಿ ನಗರದ ಒಳಚರಂಡಿ ಯೋಜನೆಗೆ ಅಂದಾಜು 250 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಅವರೊಂದಿಗೆ ಚರ್ಚಿಸಿದರು.
ಇದೇ ವೇಳೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ರಾಬಕೊ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ವೀರಶೇಖರ ರೆಡ್ಡಿ, ಎಪಿಎಂಸಿ ಸದಸ್ಯ ಕೃಷ್ಣರೆಡ್ಡಿ, ಮುಖಂಡ ಶ್ರೀನಿವಾಸ್ ಮೋತ್ಕರ್ ಇತರರು ಇದ್ದರು.

Leave a Reply

Your email address will not be published. Required fields are marked *