ಸಂಶೋಧಕ ವೆಂಕಟಾಚಲ ವಿ.ಎಸ್. ಅವರಿಗೆ ರಾಜ್ಯ ಯುವ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: 2021 ನೇ ಸಾಲಿನ ರಾಜ್ಯ ಯುವ ರತ್ನ ಪ್ರಶಸ್ತಿ ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ವೆಂಕಟಾಚಲ ವಿ.ಎಸ್. ಅವರಿಗೆ ಲಭಿಸಿದೆ.
ನಗರದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಸಂಭಾಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಒಡ್ಡರಹಳ್ಳಿ ನಿವಾಸಿ ವೆಂಕಟಾಚಲ ವಿ.ಎಸ್. ಅವರ ಶಿಕ್ಷಣ, ಸಾಹಿತ್ಯ, ಕ್ರೀಡೆ, ಸಾಂಸ್ಕೃತಿಕ, ಹಾಗೂ ಪತ್ರಿಕಾ ರಂಗ, ಸಮಾಜ ಸೇವೆಯನ್ನು ಕಳೆದ ಐದು ವರ್ಷಗಳ ಕಾಲ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ವೆಂಕಟಾಚಲ ಅವರು ಕಳೆದ ಐದು ವರ್ಷಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಗೆ ಈ ಪ್ರಶಸ್ತಿ ಬಂದಿದೆ. ಇವರಿಗೆ ಮತ್ತಷ್ಟು ಪ್ರಶಸ್ತಿಗಳು ಹುಡುಕಿಕೊಂಡು ಬರಲಿ, ಇನ್ನಷ್ಟು ಸಮಾಜ ಸೇವೆಯಲ್ಲಿ ಮುಂದುವರಿಯಲು ದೇವರು ಶಕ್ತಿ ನೀಡಲೆಂದು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಬಳಗದವರು, ಪ್ರಾಧ್ಯಾಪಕ ವೃಂದದವರು, ಅಭಿಮಾನಿ, ಕುಟುಂಬ ವರ್ಗದವರು ಶುಭ ಹಾರೈಸಿದ್ದಾರೆ.
ಪ್ರತಿ ವರ್ಷ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರಿಗೆ ಚಿಕ್ಕಬಳ್ಳಾಪುರದ ಕೇಶವಾರ ಶ್ರೀನಿವಾಸ ಚಾರಿಟಬಲ್ ಟ್ರಸ್ಟ್ ಪ್ರಶಸ್ತಿ ನೀಡಿ ಗೌರವಿಸುತ್ತದೆ.

Leave a Reply

Your email address will not be published. Required fields are marked *