Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಉದಯವಾಯಿತು ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ: ವಿಶೇಷ ರಾಜ್ಯ ಪತ್ರಿಕೆ ಪ್ರಕಟಿಸಿದ ರಾಜ್ಯ ಸರ್ಕಾರ - Karnataka Kahale

ಉದಯವಾಯಿತು ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ: ವಿಶೇಷ ರಾಜ್ಯ ಪತ್ರಿಕೆ ಪ್ರಕಟಿಸಿದ ರಾಜ್ಯ ಸರ್ಕಾರ

ಬೆಂಗಳೂರು: ನೂತನ ವಿಜಯನಗರ ರಾಜ್ಯದ 31ನೇ ಜಿಲ್ಲೆಯಾಗಿ ಅಧಿಕೃತ ಘೋಷಣೆಯಾಗಿದೆ.
ಸೋಮವಾರ ರಾಜ್ಯ ಸರ್ಕಾರ ವಿಜಯನಗರ ಹೊಸ ಜಿಲ್ಲೆಯನ್ನಾಗಿ ಘೋಷಣೆ ಮಾಡಿ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ಈ ಕುರಿತು ಕಂದಾಯ ಇಲಾಖೆ(ಭೂ ಮಾಪನ) ಸರ್ಕಾರದ ಅಧೀನ ಕಾರ್ಯದರ್ಶಿ ವಿಟಿ ರಾಜ್ಯಶ್ರೀ ಅವರು ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ( 1964ರ ಕರ್ನಾಟಕ ಅಧಿನಿಯಮ ಸಂಖ್ಯೆ 12)ರ 6ನೇ ಪ್ರಕರಣದ ಮೇರೆಗೆ ಅಗತ್ಯ ಪಡಿಸಲಾದಂತೆ ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ, ವಿಜಯ ನಗರ ಜಿಲ್ಲೆ ಎಂಬ ಹೆಸರಿನ ನೂತನ ಜಿಲ್ಲೆಯನ್ನು ರಚಿಸಲಾಗಿದೆ ಎಂದು ರಾಜ್ಯಪತ್ರದಲ್ಲಿ ಪ್ರಕಟಿಸಿದ್ದಾರೆ.
ಹೊಸಪೇಟೆ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನವಾಗಿದೆ. ನೂತನ ಜಿಲ್ಲೆಗೆ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ ಹಾಗೂ ಹರಪನಹಳ್ಳಿ ತಾಲೂಕುಗಳು ಸೇರ್ಪಡೆಯಾಗಿವೆ.
ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿದ ಬಳಿಕ ನೂತನವಾಗಿ ರಚಿಸಲಾದ ವಿಜಯನಗರ ಜಿಲ್ಲೆಯ ಸರಹದ್ದಿನ ವಿವರ: ಪೂರ್ವಕ್ಕೆ ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆ, ಪಶ್ಚಿಮಕ್ಕೆ ಗದಗ ಮತ್ತು ಹಾವೇರಿ ಜಿಲ್ಲೆ, ಉತ್ತರಕ್ಕೆ ಕೊಪ್ಪಳ ಜಿಲ್ಲೆ, ದಕ್ಷಿಣಕ್ಕೆ ದಾವಣಗೆರೆ ಜಿಲ್ಲೆಯ ಹರಿಹರ ಮತ್ತು ದಾವಣಗೆರೆ ತಾಲ್ಲೂಕುಗಳು ಇರುತ್ತವೆ.
ಬಳ್ಳಾರಿ ಜಿಲ್ಲೆಯಲ್ಲಿ ಸಂಡೂರು, ಬಳ್ಳಾರಿ, ಕಂಪ್ಲಿ, ಕುರುಗೋಡು ಮತ್ತು ಸಿರುಗುಪ್ಪ ತಾಲೂಕುಗಳು ಮುಂದುವರೆದಿವೆ.
ನೂತನ ವಿಜಯನಗರ ಜಿಲ್ಲೆ ರಚನೆಗೊಂಡ ಬಳಿಕ ಬಳ್ಳಾರಿ ಜಿಲ್ಲೆಯ ಸರಹದ್ದಿನ ವಿವರಗಳು: ಪೂರ್ವ ಮತ್ತು ದಕ್ಷಿಣಕ್ಕೆ ಆಂದ್ರಪ್ರದೇಶ ರಾಜ್ಯ, ಉತ್ತರಕ್ಕೆ ರಾಯಚೂರು ಜಿಲ್ಲೆ ಮತ್ತು ಪಶ್ಚಿಮಕ್ಕೆ ನೂತನವಾಗಿ ರಚಿತವಾದ ವಿಜಯನಗರ ಜಿಲ್ಲೆ ಇರುತ್ತವೆ.