ಹ.ಬೊ.ಹಳ್ಳಿ: ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟಿಸಿದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು

ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಹಂಪಾಪಟ್ಟಣ-ಉಪನಾಯಕನಹಳ್ಳಿ ಗ್ರಾಮಗಳ ಮಧ್ಯದಲ್ಲಿ ರೂ.19 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸೋಮವಾರ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸಚಿವರು ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡವನ್ನು ವೀಕ್ಷಿಸಿದರು.
ಸಂಸದ ವೈ.ದೇವೇಂದ್ರಪ್ಪ,ಶಾಸಕ ಭೀಮಾನಾಯಕ್ ಹಾಗೂ ಇತರರು ಇದ್ದರು.

Leave a Reply

Your email address will not be published. Required fields are marked *