Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಸಾರ್ವಜನಿಕರ ಅಹವಾಲು ಆಲಿಕೆಗೆ ಸಮಯ ನಿಗದಿಪಡಿಸಿದ ಡಿಸಿ ಮಾಲಪಾಟಿ - Karnataka Kahale

ಸಾರ್ವಜನಿಕರ ಅಹವಾಲು ಆಲಿಕೆಗೆ ಸಮಯ ನಿಗದಿಪಡಿಸಿದ ಡಿಸಿ ಮಾಲಪಾಟಿ

ಬಳ್ಳಾರಿ: ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳು ಮತ್ತು ಸಮಸ್ಯೆಗಳು ಹಾಗೂ ಅಹವಾಲುಗಳ ಆಲಿಕೆಗೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸಮಯ ಮೀಸಲಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಜನರು ಆಗಮಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕರು ಬೆಳಗ್ಗೆ 11ರಿಂದ ಮಧ್ಯಾಹ್ನ 1 ರವರೆಗೆ ಹಾಗೂ ಸಂಜೆ 4ರಿಂದ 5 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ.
ಪ್ರತಿ ಶುಕ್ರವಾರ ಮತ್ತು ತಿಂಗಳ ಮೊದಲ ಶನಿವಾರ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಭ್ಯವಿರದೇ ಜಿಲ್ಲೆಯ ವಿವಿಧೆಡೆ ಸಂಚರಿಸಿ ವಿವಿಧ ಕಾಮಗಾರಿಗಳ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮವಾಸ್ತವ್ಯ ಮಾಡಲಿದ್ದಾರೆ.
ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿ ದೂ:08392-277100 ಮೂಲಕವೂ ಕೇಳಿಕೊಳ್ಳಬಹುದಾಗಿದೆ. ದೂರದಿಂದ ಆಗಮಿಸುವ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಲಭ್ಯತೆಯನ್ನು ಡಿಸಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಿ ಖಚಿತಪಡಿಸಿಕೊಂಡು ಆಗಮಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.