Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಬಳ್ಳಾರಿ ಡಿಸಿ ಕಚೇರಿಯಲ್ಲಿ ಕೋವಿಡ್ ಕಂಟ್ರೋಲ್ ರೂಂ ಆರಂಭ - Karnataka Kahale

ಬಳ್ಳಾರಿ ಡಿಸಿ ಕಚೇರಿಯಲ್ಲಿ ಕೋವಿಡ್ ಕಂಟ್ರೋಲ್ ರೂಂ ಆರಂಭ

ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಪುನಃ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು, ತಮ್ಮ ಕಚೇರಿಯಲ್ಲಿ ಕೋವಿಡ್ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಸಾರ್ವಜನಿಕರು ಸಹಾಯವಾಣಿ ದೂ.ಸಂ:08392-277100 ಮತ್ತು ಮೊ: 8277888866 ಗೆ ಸಂಪರ್ಕಿಸಿ ಕೋವಿಡ್ ಸಂಬಂಧಿಸಿದಂತೆ ತಮ್ಮ ಕುಂದು-ಕೊರತೆ ಮತ್ತು ಸಮಸ್ಯೆಗಳನ್ನು ದಾಖಲಿಸಬಹುದು.
ಫೋಟೊ ಮತ್ತು ವೀಡಿಯೋಗಳನ್ನು ವ್ಯಾಟ್ಸ್ಯಾಪ್ ಸಂದೇಶಗಳ ಮೂಲಕ ಕಳುಹಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ಸಹಾಯವಾಣಿ ಕೇಂದ್ರವು ಸಾರ್ವಜನಿಕರ ಸೇವೆಗಾಗಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಕೋವಿಡ್ ಬಗ್ಗೆ ಸಾರ್ವಜನಿಕರು ನಿರ್ಲಕ್ಷ್ಯವಹಿಸದೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, 6 ಅಡಿಗಳ ಸಾಮಾಜಿಕ ಅಂತರ ಕಾಪಾಡುವುದು, ಕೈಗಳನ್ನು ಸಾಬೂನು ಮತ್ತು ನೀರಿನಿಂದ ಅಥವಾ ಸ್ಯಾನಿಟೈಜರ್‍ನಿಂದ ಸ್ವಚ್ಛಗೊಳಿಸುವುದನ್ನು ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯಿಸಬೇಡಿ ಎಂದು ಅವರು ಮನವಿ ಮಾಡಿದ್ದಾರೆ.
ಸಾರ್ವಜನಿಕರು ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿರುವ ಜಿಲ್ಲಾಧಿಕಾರಿ ಮಾಲಪಾಟಿ ಅವರು ಕೊರೊನಾ ವೈರಸ್ ಬಗ್ಗೆ ಭಯ ಬೇಡ ಎಚ್ಚರವಿರಲಿ,ಮುಂಜಾಗೃತೆ ವಹಿಸಿ ಎಂದು ಅವರು ಸಲಹೆ ನೀಡಿದ್ದಾರೆ.