ಬಳ್ಳಾರಿಯಲ್ಲಿ ಕ್ರಾಂತಿಯೋಗಿ ಶ್ರೀ ಬಸವೇಶ್ವರ ಜಯಂತಿ ಆಚರಣೆ

ಬಳ್ಳಾರಿ:ಜಿಲ್ಲಾಡಳಿತದ ವತಿಯಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯನ್ನು ನಗರದವಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದರು.
ನಂತರ ಡಿಸಿ ಪವನಕುಮಾರ್ ಮಾಲಪಾಟಿ ಅವರು ಎಲ್ಲರಿಗೂ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯ ಶುಭಾಷಯಗಳನ್ನು‌ ಕೋರಿದರು. ಕೋವಿಡ್ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ‌ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ ಕೆ.ರಂಗಣ್ಣನವರ್, ಚಿತ್ರ ಕಲಾವಿದ ಮಂಜುನಾಥ ಗೋವಿಂದವಾಡ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
*****

Leave a Reply

Your email address will not be published. Required fields are marked *