Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಅನಗತ್ಯ ಹೊರಗಡೆ ಬಂದರೇ ಎಫ್‍ಐಆರ್: ಎಸ್ಪಿ ಸೈದುಲು ಅಡಾವತ್ ಎಚ್ಚರಿಕೆ - Karnataka Kahale

ಅನಗತ್ಯ ಹೊರಗಡೆ ಬಂದರೇ ಎಫ್‍ಐಆರ್: ಎಸ್ಪಿ ಸೈದುಲು ಅಡಾವತ್ ಎಚ್ಚರಿಕೆ

ಬಳ್ಳಾರಿ: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಜನಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಸಾರ್ವಜನಿಕರು ಸಹಕರಿಸಬೇಕು. ಅನಗತ್ಯವಾಗಿ ಹೊರಗಡೆ ಜನರು ಕಂಡುಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿಸುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಎಚ್ಚರಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲಾಕ್ ಡೌನ್ ಆದಾಗಿನಿಂದ ಬಳ್ಳಾರಿ ಜಿಲ್ಲಾ ಪೊಲೀಸರು ನಿತ್ಯ 600 ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ. ಕಳೆದ 10 ದಿನಗಳಲ್ಲಿ 320 ಜನರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಇವರಲ್ಲಿ ಶೇ.70ರಷ್ಟು ಜನರನ್ನು ಜೈಲಿಗೆ ಕಳುಹಿಸಲಾಗಿದೆ ಎಂದರು.
ಜನರು ಅನಗತ್ಯವಾಗಿ ಹೊರಡಗಡೆ ಬರದೇ ಜಿಲ್ಲಾಡಳಿತದೊಂದಿಗೆ ಸಹಕರಿಸುವ ಮೂಲಕ ಕೋವಿಡ್ ಮಹಾಮಾರಿ ನಿಯಂತ್ರಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿರುವ ಎಸ್ಪಿ ಅವರು ನಿಯಮಗಳನ್ನು ಉಲ್ಲಂಘಿಸಿ ಹೊರಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
—–