ಲಾಕ್‍ಡೌನ್: 9500 ವಾಹನ ವಶ, 44.10ಲಕ್ಷ ರೂ.ದಂಡ ವಸೂಲಿ:ಎಸ್ಪಿ ಅಡಾವತ್

ಬಳ್ಳಾರಿ,ಮೇ 22: : ವಿಜಯನಗರ-ಬಳ್ಳಾರಿ ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿಯಾದಾಗಿನಿಂದ ಇಲ್ಲಿಯವರೆಗೆ 9500 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, 44.10ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಎಸ್ಪಿ ಸೈದುಲು ಅಡಾವತ್ ಅವರು ತಿಳಿಸಿದರು.
ನಗರದಲ್ಲಿ ಶನಿವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಶನಿವಾರದವರೆಗೆ 434 ಎಫ್‍ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ ಎಸ್ಪಿ ಅವರು, ಜನರು ಲಾಕ್‍ಡೌನ್ ನಿಯಮಾವಳಿಗಳ್ನು ಕಟ್ಟುನಿಟ್ಟಾಗಿ ಪಾಲಿಸಬೇಕು;ಒಂದು ವೇಳೆ ಹೊರಗಡೆ ಬಂದರೆ ವಾಹನಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಎಫ್‍ಐಆರ್ ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಎಚ್ಚರಿಸಿದರು.
*****

Leave a Reply

Your email address will not be published. Required fields are marked *