ಜೂ.10ರಂದು ಬಳ್ಳಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ

ಬಳ್ಳಾರಿ,ಜೂ.08: : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜೂ.10ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಈ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿರುವ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಮುಂಬರುವ ದಿನಗಳಲ್ಲಿ ಎದುರಾಗುವ ಮುಂಗಾರು ಮಳೆ ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ.
ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಖುದ್ದಾಗಿ ಭಾಗವಹಿಸಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*****

Leave a Reply

Your email address will not be published. Required fields are marked *