Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಕೊಪ್ಪಳ ಜಿಪಂ ಮೊದಲ ಮಹಿಳಾ ಸಿಇಓ ಫೌಜಿಯಾ ತರನುಮ್ ಅಧಿಕಾರ ಸ್ವೀಕಾರ - Karnataka Kahale

ಕೊಪ್ಪಳ ಜಿಪಂ ಮೊದಲ ಮಹಿಳಾ ಸಿಇಓ ಫೌಜಿಯಾ ತರನುಮ್ ಅಧಿಕಾರ ಸ್ವೀಕಾರ

ಕೊಪ್ಪಳ, ಜು.13: ಕೊಪ್ಪಳ ಜಿಲ್ಲಾ ಪಂಚಾಯತ್‌ನ ಮೊದಲ ಮಹಿಳಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ 2015 ನೇ ಐಎಎಸ್ ಬ್ಯಾಚ್‌ನ ಅಧಿಕಾರಿ ಫೌಜಿಯಾ ತರನುಮ್ ಅವರು ಈಚೆಗೆ ಅಧಿಕಾರ ಸ್ವೀಕರಿಸಿದರು.
ಇವರು ಕನ್ನಡತಿ. ಮೂಲತಃ ಬೆಂಗಳೂರಿನವರು. ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಉಪ ವಿಭಾಗೀಯ ಅಧಿಕಾರಿಯಾಗಿ, ಕಲಬುರಗಿ ಜಿಲ್ಲೆಯ ಮಹಾನಗರ ಪಾಲಿಕೆಯ ಆಯುಕ್ತರಾಗಿ, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ರಾಜ್ಯ ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ.
ಪ್ರಸ್ತುತ ಕೊಪ್ಪಳ ಜಿಲ್ಲಾ ಪಂಚಾಯತಿಯ ಮೊದಲ ಮಹಿಳಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಗೆ ಮೊದಲ ಬಾರಿಗೆ ಸಿಇಓ ಆಗಿ ಬಂದಿರುವುದು ಖುಷಿಯಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿಗಳು ಸೇರಿದಂತೆ ವಿವಿಧ ಇಲಾಖಾವಾರು ಮಾಹಿತಿ ಪಡೆದು ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ನೀಡುವುದರ ಜೊತೆಗೆ ಜಿಲ್ಲೆಯ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ಕಾರ್ಯ ನಿರ್ವಹಿಸುವೆ. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಹಕಾರವು ಅಗತ್ಯ ಎಂದರು.
ಪ್ರಸ್ತುತ ಕೋವಿಡ್ -19 ಸಂಕಷ್ಟದ ಸಂದರ್ಭದಲ್ಲಿ ಜನರು ನಿರ್ಲಕ್ಷ್ಯ ವಹಿಸದೆ ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು. ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಪಾಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
*****