ಕೊಪ್ಪಳದ ಹಿರಿಯ ಪತ್ರಕರ್ತ, ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ ಇನ್ನಿಲ್ಲ

 

ಕೊಪ್ಪಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ, ಸಾಹಿತಿ, ಜನಪರ‌ ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ (78) ಅವರು ಗುರುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಇಬ್ಬರು ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.
ಕನ್ನಡ ರಾಜ್ಯೋತ್ಸವ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ವೀರಪ್ಪ ಗೋರಂಟ್ಲಿ ಅವರು ಲಂಕೇಶ್ ಪತ್ರಿಕೆ, ಸುದ್ದಿ ಮೂಲ ಪತ್ರಿಕೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ನೂರಾರು ಜನಪರ ಚಳುವಳಿಗಳಲ್ಲಿ ತೊಡಗಿಸಿಕೊಂಡಿದ್ದರು.
ಸಂತಾಪ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದ್ದ ವಿಠಪ್ಪ ಗೋರಂಟ್ಲಿ ನಿಧನದಿಂದ, ಒಬ್ಬ ಕ್ರಿಯಾಶೀಲ ಪತ್ರಕರ್ತರನ್ನು ಕಳೆದುಕೊಂಡಂತಾಗಿದೆ ಎಂದು
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಶೋಕಿಸಿದೆ.
ಗೋರಂಟ್ಲಿ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಂಬನಿ ಮಿಡಿದಿದ್ದಾರೆ.
*****

Leave a Reply

Your email address will not be published. Required fields are marked *