ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ಇನ್ನಿಲ್ಲ

ಬೆಂಗಳೂರು, ಆ.26: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್(66)ಅವರು ಗುರುವಾರ ಬೆಂಗಳೂರಿನಲ್ಲಿ ನಿಧನರಾದರು.
ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಸಂತಾಪ: ಪತ್ರಿಕೋದ್ಯಮ ಕ್ಷೇತ್ರದ ಮೂಲಕ ರಂಗಭೂಮಿಗೆ ವಿಶಿಷ್ಟ ಕೊಡುಗೆ ನೀಡಿದ್ದ ಗುಡಿಹಳ್ಳಿ, ಪ್ರಜಾವಾಣಿ ಪತ್ರಿಕೆಯಲ್ಲಿ ಸುಧೀರ್ಘ ಅವಧಿಗೆ ಕೆಲಸ ಮಾಡಿದವರು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ದುಡಿದವರು. ಕೆಯುಡಬ್ಲ್ಯೂಜೆ ಸಂಘಟನೆಯಲ್ಲಿ ಅವರ‌ ಸೇವೆ ಮರೆಯಲಾಗದು ಎಂದು ಶ್ಲಾಘಿಸಿರುವ ತಗಡೂರು, ಗುಡಿಹಳ್ಳಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ಪ್ರಾರ್ಥಿಸಿದೆ.

ಅವಿಭಜಿತ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ಕುಗ್ರಾಮ ಗುಡಿಹಳ್ಳಿಯ ನಾಗರಾಜ್ ಅವರು ತಮ್ಮ ಪತ್ರಿಕಾ ವೃತ್ತಿಯ ಸಾಧನೆಯಿಂದ ಗ್ರಾಮಕ್ಕೆ ಕೀರ್ತಿತಂದವರು ಎಂದು ಕರ್ನಾಟಕ ಕಹಳೆ ಡಾಟ್ ಕಾಮ್ ಸಂಪಾದಕ ಸಿ.ಮಂಜುನಾಥ್ ಕಂಬನಿ ಮಿಡಿದಿದ್ದಾರೆ.
*****

Leave a Reply

Your email address will not be published. Required fields are marked *