ಬಳ್ಳಾರಿಯಲ್ಲಿ ಸರಳ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಬಳ್ಳಾರಿ, ಆ.29: ನಗರದಲ್ಲಿ ಭಾನುವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣವರ್, ಬಳ್ಳಾರಿ ಜಿಲ್ಲಾ ಗೊಲ್ಲರ ಸಂಘದ ಕಾರ್ಯದರ್ಶಿ ಕೆ.ಇ.ಚಿದಾನಂದಪ್ಪ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸೋಮಪ್ಪ ಯಾದವ್, ಖಜಾಂಚಿ ಗೋವಿಂದ ರಾಜುಲು, ಕಾರ್ಯಕಾರಿ ಸಮಿತಿ ಸದಸ್ಯರು ಆಗಿರುವ ಮಹಾನಗರ ಪಾಲಿಕೆ ಸದಸ್ಯ ಪಿ.ಗಾದೆಪ್ಪ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಸರೆಡ್ಡಿ ಯಾದವ್ , ವೆಂಕಟೇಶ್ ಯಾದವ್, ಪತ್ರಿಕಾ ಛಾಯಾಗ್ರಾಹಕ, ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳು, ಸಮಾಜದ ಯುವ ಮುಖಂಡರಾದ ಲಕ್ಷ್ಮಿನಾರಾಯಣ ಯಾದವ್,ಬತ್ರಿ ಮಲ್ಲಿಕಾರ್ಜುನ ಯಾದವ್, ಮಲ್ಲಯ್ಯ ಯಾದವ್, ಚಿತ್ರಕಲಾವಿದ ಮಂಜುನಾಥ್ ಗೋವಿಂದವಾಡ, ಪತ್ರಕರ್ತ ಗಿರಿಯಾದವ್ ಉಪಸ್ಥಿತರಿದ್ದರು.
*****

Leave a Reply

Your email address will not be published. Required fields are marked *