ಮಾಜಿ ಜಿಪಂ‌ ಸದಸ್ಯ ಎಂ‌ಎಂ‌ಜೆ ಹರ್ಷವರ್ಧನ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.6: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಕೊಟ್ಟೂರು ತಾಲೂಕಿನ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ, ವೀರಶೈವ ಮುಖಂಡ ಎಂ.ಎಂ.ಜೆ. ಹರ್ಷವರ್ಧನ್ ‌ಮತ್ತು ಕೊಟ್ಟೂರು ಎಪಿಎಂಸಿ ಮಾಜಿ ಅಧ್ಯಕ್ಷ ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಸಭೆಯ ಪ್ರತಿ ಪಕ್ಷ ನಾಯಕ ಸಿದ್ಧರಾಮಯ್ಯ ಹಾಗು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯಕ್ ಅವರ ಸಮ್ಮುಖದಲ್ಲಿ ನಗರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹರ್ಷವರ್ಧನ್ ಅವರು ಮಾಜಿ ಸಚಿವ ಸದ್ಯೋಜಾತ ಅವರ ಪುತ್ರರು. ಕಾಂಗ್ರೆಸ್ ಮುಖಂಡ ದ್ವಾರಕೀಶ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
*****

Leave a Reply

Your email address will not be published. Required fields are marked *