ಕಾರ್ಯನಿರತ ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ ಸಿಎಂಗೆ ಆಹ್ವಾನ

ಬೆಂಗಳೂರು: ಬರುವ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅತಿಥೇಯ ಕಲಬುರಗಿ ಪತ್ರಕರ್ತರು ಮನವಿ ಮಾಡಿದರು.
ಮನವಿ ಆಲಿಸಿದ ಮುಖ್ಯಮಂತ್ರಿಗಳು ಕಲಬುರಗಿಯಲ್ಲಿನ ಪತ್ರಕರ್ತರ ಸಮ್ಮೇಳನ ಕ್ಕೆ ಸಂಪೂರ್ಣ ಸಹಕಾರವಿದೆ. ಇದೇ ಸೆ. 17ಕ್ಕೆ ಕಲಬುರಗಿ ಗೆ ಆಗಮಿಸಲಾಗುತ್ತಿದೆ. ಅಲ್ಲಿ ಸಮ್ಮೇಳನ ಕುರಿತಾಗಿ ಚರ್ಚಿಸೋಣ ಎಂದು ತಿಳಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರುಅವರ ಸಮ್ನುಖದಲ್ಲಿ ಪದಾಧಿಕಾರಿಗಳು ಮುಖ್ಯಮಂತ್ರಿ ಯವರಿಗೆ ಮನವಿ ಸಲ್ಲಿಸಿ ತಮ್ಮ ಅನುಕೂಲವಾಗುವ ದಿನಾಂಕ ನಿಗದಿ ಪಡಿಸಿ ಸಮ್ಮೇಳನ ಉದ್ಘಾಟಿಸಲು ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಅವಂಟಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ, ಖಜಾಂಚಿ ರಾಜು ದೇಶಮುಖ ಸೇರಿದಂತೆ ಮುಂತಾದವರಿದ್ದರು.
*****

Leave a Reply

Your email address will not be published. Required fields are marked *