ಬಳ್ಳಾರಿಯಲ್ಲಿ ಸಿಎಂ: ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿ

ಬಳ್ಳಾರಿ, ಅ.3: ನಗರದ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ ಹಾಗೂ ವಿವಿ ಸಂಘದ ಕಿಂಡರ್ ಗಾರ್ಡನ್ ಸ್ಕೂಲಿನ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಬೆಳಿಗ್ಗೆ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಗಣಿ ಉದ್ಯಮಿ ಎಸ್.ಕೆ.ಮೋದಿ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಸಚಿವರಾದ ಗೋವಿಂದ ಕಾರಜೋಳ,ಬಿ.ಶ್ರೀರಾಮುಲು,ಸಿ.ಸಿ.ಪಾಟೀಲ್,ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ‌ ಸೋಮಶೇಖರ್ ರೆಡ್ಡಿ,ನಾಗೇಂದ್ರ,ಸೋಮಲಿಂಗಪ್ಪ,ಕೆ.ಸಿ.ಕೊಂಡಯ್ಯ. ,ಅಲ್ಲಂ ವೀರಭದ್ರಪ್ಪ, ಶಶೀಲ್‌ ನಮೋಶಿ,ಈ.ತುಕಾರಾಂ, ಬುಡಾ ಅಧ್ಯಕ್ಷ ಪಾಲನ್ನ, ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ತಿಪ್ಪಣ್ಣ ಹಾಗೂ ಜನಪ್ರತಿನಿಧಿಗಳು ಹಾಗೂ ವಿವಿ ಸಂಘದ ಪದಾಧಿಕಾರಿಗಳು ಇದ್ದರು.


*****

Leave a Reply

Your email address will not be published. Required fields are marked *