ಬಳ್ಳಾರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ: ಮೇಕೆದಾಟು ಯೋಜನೆ ನಮ್ಮ‌ ನಿಲುವಿಗೆ ಬದ್ಧ -ಸಿಎಂ ಬೊಮ್ಮಾಯಿ

ಬಳ್ಳಾರಿ, ಅ.03: ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ನಿಲುವು ಗೊತ್ತಿರುವ ವಿಚಾರ.ಅವರು ರಾಜಕಾರಣವನ್ನು ಬೆರೆಸುತ್ತಾರೆ.ಮೇಕೆದಾಟು ಯೋಜನೆ ಮಾಡುವುದು ತಮಿಳುನಾಡು ಕೈಯಲ್ಲಿ ಇಲ್ಲ. ನಮ್ಮ ಕೈಯಲ್ಲಲ್ಲಿದೆ ನಮ್ಮ ನಿಲುವಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಭಾನುವಾರ  ಖಾಸಗಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮೇಕೆದಾಟು ಯೋಜನೆ ವಿಚಾರವಾಗಿ ನಮ್ಮ ನಿಲುವು ಬದಲಾಗುವುದಿಲ್ಲ.ತಮಿಳುನಾಡಿಗೆ ಯಾವುದೇ ತೀರ್ಮಾನ ಮಾಡಲು ಅಧಿಕಾರ ಇಲ್ಲ, ಕಾನೂನಾತ್ಮಕ ಹೋರಾಟದಿಂದ ಮೇಕೆದಾಟು ಯೋಜನೆ ಹಾಗೆಯೇ ಆಗುತ್ತದೆ.ಆದ್ದರಿಂದ ಅದರ ಬಗ್ಗೆ ಮಾತನಾಡುವುದು ಅರ್ಥ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದರು.
ಇವತ್ತು ಪಕ್ಷದ ಕೋರ್ ಕಮಿಟಿ ಸಭೆ ಇದೆ. ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಇವತ್ತು ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸುತ್ತೇವೆ ಎಂದರು.
ಈ ಭಾಗದಲ್ಲಿ ಬೃಹತ್ ಸ್ಟೀಲ್ ಕಂಪನಿಗಳು ಭೂಮಿ ಪಡೆದಿವೆ.ಆದರೆ ಹತ್ತು ವರ್ಷಗಳಿಂದ ಕಾರ್ಯಾಚರಣೆ ಆರಂಭಿಸಿಲ್ಲ;ಈ ಬಗ್ಗೆ ಪುನರ್ ಪರಿಶೀಲನೆ ಮಾಡುತ್ತೇವೆ,ಏನೇನು ಕಾರಣ ಇವೆ ನೋಡಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ತುಂಗಾಭದ್ರಾ ಜಲಾಶಯದ ನೀರು ವ್ಯರ್ಥವಾಗಿ ಸಮುದ್ರಸೇರದಂತೆ ಸಮಾನಂತರ ಜಲಾಶಯ ನಿರ್ಮಾಣ ಕಾರ್ಯ ಮಾಡಲಾಗುವುದು ಎಂದು ಹೇಳಿದ ಸಿಎಂ ಬೊಮ್ಮಾಯಿ ಅವರು ಬಳ್ಳಾರಿ ನಗರದ ನಿರಂತರ ಕುಡಿಯುವ ನೀರು ಯೋಜನೆಯ ದೋಷಗಳ ಬಗ್ಗೆ ತಿಳಿದುಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ,ಬಿ.ಶ್ರೀರಾಮುಲು,ಸಿ.ಸಿ.ಪಾಟೀಲ್,ಸಂಸದರಾದ ವೈ.ದೇವೇಂದ್ರಪ್ಪ,ಕರಡಿ ಸಂಗಣ್ಣ,ಸೈಯದ್ ನಾಸೀರ್ ಹುಸೇನ್, ಶಾಸಕರಾದ‌ ಸೋಮಶೇಖರ್ ರೆಡ್ಡಿ, ನಾಗೇಂದ್ರ, ಸೋಮಲಿಂಗಪ್ಪ, ಕೆ.ಸಿ.ಕೊಂಡಯ್ಯ,ಅಲ್ಲಂ ವೀರಭದ್ರಪ್ಪ, ಶಶೀಲ್‌ ನಮೋಶಿ,ಈ.ತುಕಾರಾಂ,ಬುಡಾ ಅಧ್ಯಕ್ಷ ಪಾಲನ್ನ,ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ತಿಪ್ಪಣ್ಣ ಇತರರು ಇದ್ದರು.
*****

Leave a Reply

Your email address will not be published. Required fields are marked *